ಉಡುಪಿ: ಭಾರತ್ ಸ್ಕೌಟ್ಸ್ - ಗೈಡ್ಸ್ ಸಂಸ್ಥಾಪನಾ ದಿನಾಚರಣೆ

| Published : Nov 09 2024, 01:17 AM IST / Updated: Nov 09 2024, 01:18 AM IST

ಸಾರಾಂಶ

ಸಂಸ್ಥಾಪನಾ ದಿನಾಚರಣೆ

ಕನ್ನಡಪ್ರಭ ವಾರ್ತೆ ಉಡುಪಿ

ಕರ್ನಾಟಕ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಉಡುಪಿಯಲ್ಲಿ ಗುರುವಾರ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವಜ್ರ ಮಹೋತ್ಸವ ಪ್ರಾರಂಭದ ಅಂಗವಾಗಿ ಸಂಸ್ಥಾಪನಾ ದಿನಾಚರಣೆಯನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ, ಸ್ಕೌಟ್ಸ್ - ಗೈಡ್ಸ್ ನಿಧಿಗೆ ದೇಣಿಗೆ ನೀಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಜಿಲ್ಲಾ ಸಂಸ್ಥೆಯ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ್ ಶೆಟ್ಟಿ, ಜಿಲ್ಲಾ ಸ್ಕೌಟ್ ಆಯುಕ್ತ ಜನಾರ್ದನ್ ಕೊಡವೂರು, ಜಿಲ್ಲಾ ಕಾರ್ಯದರ್ಶಿ ಆನಂದ್ ಅಡಿಗ, ಜಿಲ್ಲಾ ಖಜಾಂಚಿ ಹರಿಪ್ರಸಾದ್ ರೈ, ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಶೇಖರ್ ಪೂಜಾರಿ, ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಸುಮನ್ ಶೇಖರ್ ಬನ್ನಿ ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ದಳ ನಾಯಕಿಯರು, ಕಬ್ - ಬುಲ್‌ಬುಲ್, ಸ್ಕೌಟ್ಸ್ - ಗೈಡ್ಸ್, ರೋವರ್ - ರೇಂಜರ್ಸ್ ಇವರೆಲ್ಲರ ಸಮ್ಮುಖದಲ್ಲಿ ಧ್ವಜ ಚೀಟಿಯನ್ನು ಬಿಡುಗಡೆ ಮಾಡಲಾಯಿತು.

ಇತರ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ದೇಣಿಗೆಯನ್ನು ಸಂಗ್ರಹಿಸಲಾಯಿತು. ಜಿಲ್ಲಾ ಪದಾಧಿಕಾರಿಯವರೆಲ್ಲರೂ ಕಾರ್ಯಕ್ರಮದಲ್ಲಿ ಕೈಜೋಡಿಸಿದರು.