ಉಡುಪಿ: ಇಲ್ಲಿನ ಯಕ್ಷಶಿಕ್ಷಣ ಟ್ರಸ್ಟ್ ಯಕ್ಷಗಾನ ಕಲಾರಂಗದ ಐವೈಸಿಯಲ್ಲಿ ಆಯೋಜಿಸಿದ್ದ ನಾಲ್ಕು ದಿನಗಳ ಮುಖವರ್ಣಿಕೆ ಶಿಬಿರವು ಗುರುವಾರ ಸಮಾಪನಗೊಂಡಿತು. ಗುರು ಸಂಜೀವ ಸುವರ್ಣ ಅವರ ನಿರ್ದೇಶನದಲ್ಲಿ ಪ್ರಸಾಧನ ತಜ್ಞ ಮಿಥುನ್ ನಾಯಕ್ ಮಕ್ಕಳಿಗೆ ಮಾರ್ಗದರ್ಶನ ನೀಡಿದರು. ಸಂಸ್ಥೆಯ ಉಪಾಧ್ಯಕ್ಷ ವಿ. ಜಿ. ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಾಜಸೇವಕರಾದ ಯು. ವಿಶ್ವನಾಥ ಶೆಣೈ, ತಾರಾದೇವಿ ಅಭ್ಯಾಗತರಾಗಿ ಭಾಗವಹಿಸಿದ್ದರು.

ಸಂಸ್ಥೆಯ ಸದಸ್ಯರಾದ ನಿರಂಜನ ಭಟ್ ಯು., ಅನಂತರಾಜ ಉಪಾಧ್ಯ, ಎಚ್. ಎನ್. ವೆಂಕಟೇಶ್, ಎನ್. ರಾಮ ಭಟ್, ಡಾ. ಪ್ರತಿಮಾ ಜೆ. ಆಚಾರ್ಯ, ರವಿರಾಜ್ ಎಚ್. ಪಿ., ಪ್ರಶಾಂತ್ ಕಾಮತ್ ಉಪಸ್ಥಿತರಿದ್ದರು.

ಸಂಸ್ಥೆಯ ಜತೆಕಾರ್ಯದರ್ಶಿ ನಾರಾಯಣ ಎಂ. ಹೆಗಡೆ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರ್ವಹಿಸಿದರು. ಈ ನಾಲ್ಕು ದಿನಗಳಲ್ಲಿ ಮಕ್ಕಳು ಸ್ವತಂತ್ರವಾಗಿ ವಿವಿಧ ವೇಷಗಳ ಮುಖವರ್ಣಿಕೆ, ಕಸೆ, ಗೆಜ್ಜೆ ಮತ್ತು ವೇಷಭೂಷಣ ಕಟ್ಟಿಕೊಳ್ಳುವುದನ್ನು ಕಲಿತುಕೊಂಡರು. ಎಲ್ಲಾ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ಹಾಗೂ ಅಭ್ಯಾಸ ಮಾಡಲು ಪೂರಕವಾಗುವಂತೆ ಬಣ್ಣದ ಕಿಟ್ ವಿತರಿಸಲಾಯಿತು. 28 ಜನ ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ನಿನ್ನೆ ಅಗಲಿದ ಹಿರಿಯ ಯಕ್ಷಗಾನ ಕಲಾವಿದ ಕಪ್ಪೆಕೆರೆ ಸುಬ್ರಾಯ ಭಾಗವತರಿಗೆ ಶ್ರದ್ಧಾಂಜಲಿ ಸಮರ್ಪಿಸಲಾಯಿತು.