ಉಡುಪಿ: ಕ್ಷಯ ರೋಗಿಗಳಿಗೆ ಆಹಾರ ಕಿಟ್‌ ಉಚಿತ ವಿತರಣೆ

| Published : Oct 04 2025, 12:00 AM IST

ಸಾರಾಂಶ

ಎಂ.ಸಿ.ಕೆ.ಎಸ್- ಫುಡ್ ಫಾರ್ ದಿ ಹಂಗ್ರಿ ಫೌಂಡೇಶನ್ ವತಿಯಿಂದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ೧೭ ಬಡ ಕ್ಷಯ ರೋಗಿಗಳಿಗೆ ಅಕ್ಕಿ, ಬೇಳೆ, ಅಡುಗೆ ಎಣ್ಣೆ ಹಾಗೂ ಸಿರಿಧಾನ್ಯ ಸೇರಿದಂತೆ ದಿನನಿತ್ಯ ಬಳಸುವ ಅಡುಗೆ ಪದಾರ್ಥಗಳ ಆಹಾರದ ಕಿಟ್‌ಗಳನ್ನು ಉಚಿತವಾಗಿ ನೀಡಲಾಯಿತು.

ಉಡುಪಿ: ‘ಸ್ವಸ್ಥ ನಾರಿ ಸಶಕ್ತ ಪರಿವಾರ್’ ಅಭಿಯಾನದ ಅಂಗವಾಗಿ ಎಂ.ಸಿ.ಕೆ.ಎಸ್- ಫುಡ್ ಫಾರ್ ದಿ ಹಂಗ್ರಿ ಫೌಂಡೇಶನ್ ವತಿಯಿಂದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ೧೭ ಬಡ ಕ್ಷಯ ರೋಗಿಗಳಿಗೆ ಅಕ್ಕಿ, ಬೇಳೆ, ಅಡುಗೆ ಎಣ್ಣೆ ಹಾಗೂ ಸಿರಿಧಾನ್ಯ ಸೇರಿದಂತೆ ದಿನನಿತ್ಯ ಬಳಸುವ ಅಡುಗೆ ಪದಾರ್ಥಗಳ ಆಹಾರದ ಕಿಟ್‌ಗಳನ್ನು ಉಚಿತವಾಗಿ ನೀಡಲಾಯಿತು.

ಈ ಸಂದರ್ಭ ಮಾತನಾಡಿದ ಜಿಲ್ಲಾ ಸರ್ಜನ್ ಡಾ. ಎಚ್. ಅಶೋಕ್, ಪೌಷ್ಟಿಕಾಂಶಯುಕ್ತ ಆಹಾರ ಪದಾರ್ಥಗಳನ್ನು ಉಚಿತವಾಗಿ ನೀಡುವುದರಿಂದ ಬಡ ರೋಗಿಗಳಿಗೆ ಸಹಾಯವಾಗುವ ಜೊತೆಗೆ ಅವರಿಗೆ ಮಾನಸಿಕ ಧೈರ್ಯ ತುಂಬಿದಂತಾಗುತ್ತದೆ. ಈ ಕಾರ್ಯ ಇತರ ಸಂಘ ಸಂಸ್ಥೆಗಳಿಗೂ ಸ್ಪೂರ್ತಿದಾಯಕವಾಗಿದೆ ಎಂದು ಅಭಿಪ್ರಾಯಪಟ್ಟರು.ಕೇವಲ ಸರ್ಕಾರ ಮಾತ್ರವಲ್ಲದೆ ಸಂಘ ಸಂಸ್ಥೆಗಳೂ ಈ ಕಾರ್ಯದಲ್ಲಿ ಸಹಕಾರ ನೀಡಿದಲ್ಲಿ ಕ್ಷಯ ರೋಗವನ್ನು ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ ಎಂದರು.ಕಾರ್ಯಕ್ರಮದಲ್ಲಿ ನಿವಾಸಿ ವೈದ್ಯಾಧಿಕಾರಿ ಡಾ. ವಾಸುದೇವ ಎಸ್., ಎಂ.ಸಿ.ಕೆ.ಎಸ್ ಮುಖ್ಯಸ್ಥೆ ನಿಧಿ ಹಾಗೂ ಆಸ್ಪತ್ರೆಯ ಸಿಬ್ಬಂದಿ ಉಪಸ್ಥಿತರಿದ್ದರು.