ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಆಸ್ಪತ್ರೆ ಜಿಲ್ಲಾ ಸರ್ವೇಕ್ಷಣ ಘಟಕ, ರಾಷ್ಟ್ರೀಯ ಆರೋಗ್ಯ ಅಭಿಯಾನ ಉಡುಪಿ, ಆದರ್ಶ ಆಸ್ಪತ್ರೆ ಉಡುಪಿ, ಪ್ರಸಾದ್ ನೇತ್ರಾಲಯ ಉಡುಪಿ ಇವುಗಳ ಸಹಯೋಗದೊಂದಿಗೆ ಪತ್ರಕರ್ತರಿಗೆ ಉಚಿತ ಆರೋಗ್ಯ ಶಿಬಿರವನ್ನು ಬುಧವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿತ್ತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಸಂಘದ 2025 - 26 ನೇ ಸಾಲಿನ ಸದಸ್ಯತ್ವ ಕಾರ್ಡ್‌ಗಳನ್ನು ವಿತರಿಸಲಾಯಿತು.ಜಿಲ್ಲಾ ಸರ್ಜನ್ ಡಾ. ಎಚ್. ಅಶೋಕ್, ವಾರ್ತಾಧಿಕಾರಿ ಮಂಜುನಾಥ್ ಮಾತನಾಡಿದರು. ಸಂಘದ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸಮಿತಿ ಸದಸ್ಯ ಅಸ್ಟ್ರೋ ಮೋಹನ್, ಜಿಲ್ಲಾ ಕೋಶಾಧಿಕಾರಿ ಹರೀಶ್ ಕುಂದರ್ ಉಪಸ್ಥಿತರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿ, ವಂದಿಸಿದರು. ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ನಿರೂಪಿಸಿದರು.

ಶಿಬಿರದಲ್ಲಿ ಮಧುಮೇಹ, ರಕ್ತದೊತ್ತಡ, ಇಸಿಜಿ, ಹಿಮೋಗ್ಲೋಬಿನ್ ಪರೀಕ್ಷೆ, ಕೊಲೆಸ್ಟ್ರಾಲ್, ಕಣ್ಣಿನ ಪರೀಕ್ಷೆಗಳನ್ನು ನಡೆಸಲಾಯಿತು. 100ಕ್ಕೂ ಅಧಿಕ ಪತ್ರಕರ್ತರು ಭಾಗವಹಿಸಿ ಪ್ರಯೋಜನ ಪಡೆದುಕೊಂಡರು.