ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರ ನೀಡುವ ನಿಟ್ಟಿನಲ್ಲಿ ಪ್ರತಿದಿನ ನೀಡುತ್ತಿರುವ ಮೊಟ್ಟೆಯ ದರ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆಯಲ್ಲಿ ವ್ಯತ್ಯಯವಾಗುತ್ತಿದ್ದು, ಈ ಬಗ್ಗೆ ತಕ್ಷಣ ಕ್ರಮ ವಹಿಸುವಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ.

ಉಡುಪಿ: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರ ನೀಡುವ ನಿಟ್ಟಿನಲ್ಲಿ ಪ್ರತಿದಿನ ನೀಡುತ್ತಿರುವ ಮೊಟ್ಟೆಯ ದರ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆಯಲ್ಲಿ ವ್ಯತ್ಯಯವಾಗುತ್ತಿದ್ದು, ಈ ಬಗ್ಗೆ ತಕ್ಷಣ ಕ್ರಮ ವಹಿಸುವಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ.

ರಾಜ್ಯ ಸರ್ಕಾರವು ಮೊಟ್ಟೆಯೊಂದರ ಖರೀದಿಗೆ 6 ರುಪಾಯಿಗಳಂತೆ ಶಾಲೆಗಳಿಗೆ ಬಿಡುಗಡೆ ಮಾಡುತ್ತಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಮೊಟ್ಟೆಯ ಬೆಲೆಯು ಗಣನೀಯವಾಗಿ ಏರಿಕೆಯಾಗಿದ್ದು, ವಿದ್ಯಾರ್ಥಿಗಳಿಗಾಗಿ ಮುಖ್ಯ ಶಿಕ್ಷಕರು ರು. 10 ನೀಡಿ ಖರೀದಿಸುವಂತಾಗಿದೆ. ಇದರಿಂದ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ಮಾಡುವಲ್ಲಿ ಆರ್ಥಿಕವಾಗಿ ತೊಂದರೆಗಳು ಎದುರಾಗುತ್ತಿದೆ. ಮಾರುಕಟ್ಟೆ ದರದಲ್ಲಿ ಮೊಟ್ಟೆ ಖರೀದಿಗೆ ಸೂಕ್ತ ಅವಕಾಶ ಕಲ್ಪಿಸಿ, ಸರ್ಕಾರದ ಮಹತ್ತರ ಕಾರ್ಯಕ್ರಮವನ್ನು ನಿರಾತಂಕವಾಗಿ ಮುಂದುವರಿಸಲು ಕ್ರಮ ವಹಿಸುವಂತೆ ಸುವರ್ಣ ಮನವಿ ಮಾಡಿದ್ದಾರೆ.