ಉಡುಪಿ: ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನಲ್ಲಿ ‘ಜ್ಞಾನಂ 2025’

| Published : Oct 29 2025, 11:00 PM IST

ಸಾರಾಂಶ

ಮಂಗಳವಾರ ಉಡುಪಿಯ ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ವತಿಯಿಂದ ಜ್ಞಾನಂ - 2025ನ್ನು ಸಮಾರಂಭ ನೆರವೇರಿತು.

ಉಡುಪಿ: ಇಲ್ಲಿನ ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಬಹಳಷ್ಟು ಜನರಿಗೆ ಬದುಕು ಕಟ್ಟಿಕೊಟ್ಟ ಸಂಸ್ಥೆ. ಶ್ರೀ ವಿಭುದೇಶ ತೀರ್ಥ ಶ್ರೀಪಾದರ ದೂರದೃಷ್ಟಿತ್ವದಿಂದ ರೂಪುಗೊಂಡ ಈ ಸಂಸ್ಥೆಯು ಗುಣಮಟ್ಟದ ವಿದ್ಯೆ, ಸಂಸ್ಕಾರ ಹಾಗೂ ಸಂಸ್ಕೃತಿಯ ಅರಿವನ್ನು ನೀಡುವ ಮೂಲಕ ಸಮಾಜದಲ್ಲಿ ಉತ್ತಮ ವ್ಯಕ್ತಿಯ ನಿರ್ಮಾಣ ಮಾಡಲು ಸದಾ ಶ್ರಮಿಸುತ್ತಿದೆ. ನಾನು ಈ ಸಂಸ್ಥೆಯ ಹಳೆ ವಿದ್ಯಾರ್ಥಿ ಎಂಬುದಕ್ಕೆ ಬಹಳ ಹೆಮ್ಮೆಪಡುತ್ತೇನೆ. ವಿದ್ಯಾರ್ಥಿಗಳು ಇಲ್ಲಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು, ಸದ್ವಿಚಾರಗಳನ್ನು ಮೈಗೂಡಿಸಿಕೊಂಡು ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಳ್ಳ್ಳಬೇಕು ಎಂದು ಶಾಸಕ ಯಶ್‌ಪಾಲ್ ಸುವರ್ಣ ಕರೆ ನೀಡಿದ್ದಾರೆ.ಮಂಗಳವಾರ ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ವತಿಯಿಂದ ಆಯೋಜಿಸಲಾದ ಜ್ಞಾನಂ - 2025ನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮುಖ್ಯ ಅಭ್ಯಾಗತರಾಗಿ ಆಗಮಿಸಿದ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಮತ್ತು ಸಂಸ್ಥೆಯ ಗೌರವ ಕಾರ್ಯದರ್ಶಿ ಸಿಎ ಟಿ. ಪ್ರಶಾಂತ್ ಹೊಳ್ಳ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ. ಚಂದ್ರಕಾಂತ್ ಭಟ್ ವಹಿಸಿದ್ದರು.ವೇದಿಕೆಯಲ್ಲಿ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಘಟಕದ ಸಂಯೋಜಕ ಡಾ. ರಾಘವೇಂದ್ರ ಎಲ್, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿಗಳಾದ ವಿನಾಯಕ್ ಪೈ ಬಿ., ಡಾ. ಪ್ರಜ್ಞಾ ಮಾರ್ಪಳ್ಳಿ. ಕಾರ್ಯಕ್ರಮ ಸಂಯೋಜಕಿ ಗೌರಿ ಶೆಣೈ ಹಾಗೂ ವಿದ್ಯಾರ್ಥಿ ನಾಯಕ ಗಗನ್ ಜೆ. ಸುವರ್ಣ ಅವರು ಉಪಸ್ಥಿತರಿದ್ದರು. ರಾನಿಯ ನಿರೂಪಿಸಿದರು. ವಿದ್ಯಾರ್ಥಿ ನಾಯಕ ಗಗನ್ ಜೆ. ಸುವರ್ಣ ಸ್ವಾಗತಿಸಿದರು. ಎನ್ಎಸ್ಎಸ್ ಘಟಕ ನಾಯಕ ವಿಶ್ವಾಸ್ ವಂದಿಸಿದರು.