ಉಡುಪಿ: ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

| Published : Sep 22 2024, 01:49 AM IST

ಸಾರಾಂಶ

ಅಂತಾರಾಷ್ಟ್ರೀಯ ವಿಶ್ವ ಶಾಂತಿ ದಿನದ ಅಂಗವಾಗಿ ಶನಿವಾರ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಂದ ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾವನ್ನು ಆಯೋಜಿಸಲಾಗಿತ್ತು.

ಕನ್ನಡಪ್ರಭ ವಾರ್ತೆ ಉಡುಪಿ

ಅಂತಾರಾಷ್ಟ್ರೀಯ ವಿಶ್ವ ಶಾಂತಿ ದಿನದ ಅಂಗವಾಗಿ ಶನಿವಾರ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಂದ ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾವನ್ನು ಆಯೋಜಿಸಲಾಗಿತ್ತು.

ಭಾರತೀಯ ರೆಡ್‌ ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ ಶಾಖೆ, ಮಂಗಳೂರು ವಿಶ್ವವಿದ್ಯಾನಿಲಯ, ಯುವ ರೆಡ್ ಕ್ರಾಸ್ ಘಟಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ, ಲಯನ್ಸ್ ಕ್ಲಬ್ ಉಡುಪಿ ಮಿಡ್ ಟೌನ್ ಮತ್ತು ಲಯನ್ಸ್ ಕ್ಲಬ್ ಉಡುಪಿ ಅಮೃತ್ ಸಂಯುಕ್ತ ಆಶ್ರಯದಲ್ಲಿ ಈ ಜಾಥಾ ನಡೆಯಿತು.ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕರ್ನಾಟಕ ರಾಜ್ಯ ಶಾಖೆಯ ಆಡಳಿತ ಮಂಡಳಿ ಸದಸ್ಯ ವಿ.ಜಿ. ಶೆಟ್ಟಿ, ಜಾಥಾಕ್ಕೆ ಚಾಲನೆ ನೀಡಿದರು. ಜಾಥಾವು ಸಂತೆಕಟ್ಟೆ ಬಸ್‌ ನಿಲ್ದಾಣದಿಂದ ಹೊರಟು ಅಂಬಾಗಿಲು ಮೂಲಕ ಅಮೃತ್ ಗಾರ್ಡನ್‌ನಲ್ಲಿ ಸಮಾಪನಗೊಂಡಿತು.ಜಾಥಾದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ, ರೆಡ್ ಕ್ರಾಸ್ ಗೌರವ ಖಚಾಂಚಿ ರಮಾದೇವಿ, ರೆಡ್ ಕ್ರಾಸ್ ಪದಾಧಿಕಾರಿಗಳಾದ ಟಿ. ಚಂದ್ರಶೇಖರ್, ಬಾಲಕೃಷ್ಣ ಶೆಟ್ಟಿ ಕೆ., ಲಯನ್ ವಲಯಾಧ್ಯಕ್ಷ ಅನಂತ ಶೆಟ್ಟಿ, ಖಚಾಂಚಿ ರೇಖಾ ಶೆಟ್ಟಿ, ರೆಡ್‌ಕ್ರಾಸ್ ಸದಸ್ಯ ರಾಘವೇಂದ್ರ ಪ್ರಭು ಕರ್ವಾಲ್, ರೆಡ್‌ಕ್ರಾಸ್‌ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು, ಜಿಲ್ಲೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು, ರೆಡ್ ಕ್ರಾಸ್ ಮತ್ತು ಡಿಡಿಆರ್‌ಸಿ ಸಿಬ್ಬಂದಿ ಭಾಗವಹಿಸಿದ್ದರು.