ಸಾರಾಂಶ
ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ಉಡುಪಿ ಟೌನ್ ಬನ್ನಂಜೆಯ ಎಸ್.ಪಿ. ಕಚೇರಿ ಬಳಿಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಕಟ್ಟಡದ ಉದ್ಘಾಟನೆಯನ್ನು ಶಾಸಕ ಯಶ್ಪಾಲ್ ಎ. ಸುವರ್ಣ ನೆರವೇರಿಸಿದರು.
ಕನ್ನಡಪ್ರಭ ವಾರ್ತೆ ಉಡುಪಿ
ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ಉಡುಪಿ ಟೌನ್ ಬನ್ನಂಜೆಯ ಎಸ್.ಪಿ. ಕಚೇರಿ ಬಳಿಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಕಟ್ಟಡದ ಉದ್ಘಾಟನೆಯನ್ನು ಶಾಸಕ ಯಶ್ಪಾಲ್ ಎ. ಸುವರ್ಣ ಶುಕ್ರವಾರ ನೆರವೇರಿಸಿದರು.ಈ ಸಂದರ್ಭ ನಗರಸಭೆ ಸದಸ್ಯೆ ಸವಿತಾ ಹರೀಶ್, ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶ್ರೀನಿವಾಸ ರಾವ್, ಪೌರಾಯುಕ್ತ ಉದಯ್ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾರಾಯಣ ಸ್ವಾಮಿ, ಮುಖಂಡರು, ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಕಾಡಬೆಟ್ಟುವಿನಲ್ಲಿ ನೂತನವಾಗಿ ನಿರ್ಮಿಸಲಾದ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಕಟ್ಟಡವನ್ನೂ ಶಾಸಕ ಯಶ್ಪಾಲ್ ಎ ಸುವರ್ಣ ಉದ್ಘಾಟಿಸಿ, ಶುಭ ಹಾರೈಸಿದರು.