ಸಾರಾಂಶ
ನಗರಸಭೆಯ ಮೂಡು ಸಗ್ರಿ ವಾರ್ಡಿನ ಚಕ್ರತೀರ್ಥ ಬಳಿ ಸುಮಾರು 13.50 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಸೇತುವೆಯನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಭಾನುವಾರ ಉದ್ಘಾಟಿಸಿದರು.
ಕನ್ನಡಪ್ರಭ ವಾರ್ತೆ ಉಡುಪಿ
ನಗರಸಭೆಯ ಮೂಡು ಸಗ್ರಿ ವಾರ್ಡಿನ ಚಕ್ರತೀರ್ಥ ಬಳಿ ಸುಮಾರು 13.50 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಸೇತುವೆಯನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಭಾನುವಾರ ಉದ್ಘಾಟಿಸಿದರು.ಈ ಸಂದರ್ಭ ಮಾತನಾಡಿದ ಅವರು, ಮಳೆಗಾಲದಲ್ಲಿ ಹಳೆ ಸೇತುವೆ ಕುಸಿತಗೊಂಡಿದ್ದು, ನಗರಸಭೆಯ ಅನುದಾನದ ಮೂಲಕ ನೂತನ ಸೇತುವೆಯನ್ನು ನಿರ್ಮಿಸಲಾಗಿದೆ. ಸಗ್ರಿ ವಾರ್ಡಿನ ಇನ್ನೊಂದು ಸೇತುವೆಯ ಕಾಮಗಾರಿಯು ಶೀಘ್ರದಲ್ಲಿ ಪ್ರಾರಂಭಗೊಳ್ಳಲಿದೆ ಎಂದರು.ಈಗಾಗಲೇ ಉಡುಪಿ ನಗರಸಭಾ ವ್ಯಾಪ್ತಿಯ ಪ್ರಮುಖ ರಸ್ತೆಗಳು, ಚರಂಡಿ ಸಹಿತ ಮೂಲಸೌಕರ್ಯ ಅಭಿವೃದ್ಧಿಗೆ ಸುಮಾರು 5 ಕೋಟಿ ರು.ಗಳ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯಲ್ಲಿದ್ದು, ಲೋಕೋಪಯೋಗಿ ಇಲಾಖೆಯ ರಸ್ತೆಗಳ ತುರ್ತು ನಿರ್ವಹಣೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.ಈ ಸಂದರ್ಭ ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಸಭಾ ಸದಸ್ಯರಾದ ಭಾರತಿ ಪ್ರಶಾಂತ್, ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್, ಸ್ಥಳೀಯ ಗಣ್ಯರಾದ ವೇದವ್ಯಾಸ ಐತಾಳ್, ರವಿ ಐತಾಳ್, ಸ್ಥಳೀಯ ಮುಖಂಡರಾದ ಸಂತೋಷ್ ಆಚಾರ್ಯ, ಪ್ರಶಾಂತ್ ಅಮೀನ್ ಮೊದಲಾದವರು ಉಪಸ್ಥಿತರಿದ್ದರು.