ಸಾರಾಂಶ
ಕುತ್ಪಾಡಿಯ ಶ್ರೀ ಮಂಜುನಾಥೇಶ್ವರ ಆಯುರ್ವೇದ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ೭೯ನೇ ಸ್ವಾತಂತ್ರ್ಯೋತ್ಸವವನ್ನು ಸಮಸ್ತ ವಿದ್ಯಾರ್ಥಿ ಮತ್ತು ಶಿಕ್ಷಕ ವೃಂದದವರ ಉಪಸ್ಥಿತಿಯಲ್ಲಿ ಆಚರಿಸಲಾಯಿತು. ವಿಂಗ್ ಕಮಾಂಡರ್ ಭೋಜರಾಜ್ ಮಣಿಪಾಲ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.
ಕನ್ನಡಪ್ರಭ ವಾರ್ತೆ ಉಡುಪಿ
ಇಲ್ಲಿನ ಕುತ್ಪಾಡಿಯ ಶ್ರೀ ಮಂಜುನಾಥೇಶ್ವರ ಆಯುರ್ವೇದ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ೭೯ನೇ ಸ್ವಾತಂತ್ರ್ಯೋತ್ಸವವನ್ನು ಸಮಸ್ತ ವಿದ್ಯಾರ್ಥಿ ಮತ್ತು ಶಿಕ್ಷಕ ವೃಂದದವರ ಉಪಸ್ಥಿತಿಯಲ್ಲಿ ಆಚರಿಸಲಾಯಿತು. ವಿಂಗ್ ಕಮಾಂಡರ್ ಭೋಜರಾಜ್ ಮಣಿಪಾಲ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.ನಂತರ ಅವರು ಸ್ವಾತಂತ್ರ್ಯಪೂರ್ವಜಲ್ಲಿ ನಮ್ಮ ಹಿರಿಯರು ನಡೆಸಿದ ಮತ್ತು ನಂತರ ನಮ್ಮ ದೇಶದ ಯೋಧರು ಅನೇಕ ಸಂದರ್ಭದಲ್ಲಿ ನಡೆಸಿದ ಹೋರಾಟದ ಬಗ್ಗೆ ನೆರೆದಿದ್ದ ವಿದ್ಯಾರ್ಥಿಗಳಿಗೆ ವಿವರಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ಮಮತಾ ಕೆ.ವಿ. ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಸ್ವಾತಂತ್ರ್ಯೋತ್ಸವಕ್ಕೆ ಶುಭ ಹಾರೈಸಿದರು. ಶಿವಲಿಂಗಪ್ಪ ಹಾಗೂ ಕು. ಸೃಷ್ಟಿ ಜಿ.ಎಸ್. ಇವರು ಧ್ವಜಾರೋಹಣ ಮತ್ತು ಧ್ವಜವಂದನಾ ಕಾರ್ಯಕ್ರಮ ನಿರ್ವಹಿಸಿದರು.ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ನಾಗರಾಜ್ ಎಸ್., ಸ್ನಾತಕ ವಿಭಾಗದ ಡೀನ್ ಡಾ. ಪ್ರಥ್ವಿರಾಜ್ ಪುರಾಣಿಕ್, ಸಮುದಾಯ ಸೇವಾ ವಿಭಾಗದ ಮುಖ್ಯಸ್ಥ ಡಾ. ವಿದ್ಯಾಲಕ್ಷ್ಮಿ ಕೆ., ಎಸ್.ಡಿ.ಎಮ್. ಆಯುರ್ವೇದ ಫಾರ್ಮಸಿಯ ಜನರಲ್ ಮ್ಯಾನೇಜರ್ ಡಾ. ಮುರಳೀಧರ ಆರ್. ಬಲ್ಲಾಳ್ ಉಪಸ್ಥಿತರಿದ್ದರು.ಈ ಸಂದರ್ಭ ರ್‍ಯಾಗಿಂಗ್ ವಿರೋಧದ ಬಗ್ಗೆ ಬೀದಿ ನಾಟಕವನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು. ವಿದ್ಯಾರ್ಥಿಗಳಾದ ಧನ್ಯತಾ ಸ್ವಾಗತಿಸಿದರು. ನಾಗಶ್ರೀ ವಂದಿಸಿದರು. ನವ್ಯ ಜಿ. ಕಾರ್ಯಕ್ರಮವನ್ನು ನಿರೂಪಿಸಿದರು. ಕಾಲೇಜಿನ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ ಪ್ರಸ್ತುತಗೊಂಡಿತು.