ಉಡುಪಿ ಸಮಾಜದಲ್ಲಿ ಶಾಂತಿ, ನೆಮ್ಮದಿ ಹಾಗೂ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಸಲ್ಲಿಸುತ್ತಿರುವ ಸೇವೆ ಶ್ಲಾಘನೀಯ. ಕರ್ತವ್ಯ ನಿರ್ವಹಿಸುವ ವೇಳೆ ಸಮಾಜದ ರಕ್ಷಣೆಗಾಗಿ ಪ್ರಾಣತ್ಯಾಗ ಮಾಡಿದ ಪೊಲೀಸ್ ಹುತಾತ್ಮರನ್ನು ಸ್ಮರಿಸುವುದು ಸಮಾಜದ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣನವರ್ ಹೇಳಿದರು.
ಅವರು ಬುಧವಾರ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ ಕೇಂದ್ರಸ್ಥಾನದಲ್ಲಿ ಆಯೋಜಿಸಲಾದ ಪೊಲೀಸ್ ಹುತಾತ್ಮ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ ಸ್ಮಾರಕಕ್ಕೆ ಗೌರವ ಸಲ್ಲಿಸಿ ಮಾತನಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಾತನಾಡಿ, 1959ರ ಅಕ್ಟೋಬರ್ 21ರಂದು ಲಡಾಖ್ ಸಮೀಪ ಚೀನಾದ ಸೈನಿಕರು ನಡೆಸಿದ ದಾಳಿಯನ್ನು ಧೈರ್ಯದಿಂದ ಎದುರಿಸಿದ ಸಿಆರ್‌ಪಿಎಫ್‌ನ 10 ಪೊಲೀಸರು ವೀರಮರಣವನ್ನಪ್ಪಿದ್ದರು. 9 ಪೊಲೀಸರು ಗಾಯಗೊಂಡು ಶತ್ರುಗಳ ವಶಕ್ಕೆ ಸಿಲುಕಿದ್ದರು. ಈ ಘಟನೆಯಲ್ಲಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಪೊಲೀಸ್ ಸಿಬ್ಬಂದಿಯ ಸ್ಮರಣಾರ್ಥ ಪ್ರತಿವರ್ಷ ಅ. 21ರಂದು ಪೊಲೀಸ್ ಹುತಾತ್ಮ ದಿನವನ್ನು ಆಚರಿಸಲಾಗುತ್ತದೆ ಎಂದು ತಿಳಿಸಿದರು.ಮೂರು ಸುತ್ತು ಕುಶಾಲತೋಪು ಹಾರಿಸುವ ಮೂಲಕ ಹುತಾತ್ಮರಿಗೆ ಗೌರವ ಸಲ್ಲಿಸಲಾಯಿತು. ಪೊಲೀಸ್ ಧ್ವಜವನ್ನು ಅರ್ಧಮಟ್ಟಕ್ಕೆ ಇಳಿಸಿ ಹುತಾತ್ಮರನ್ನು ಸ್ಮರಿಸಲಾಯಿತು.ಎಎಸ್ಪಿ ಸುಧಾಕರ ನಾಯ್ಕ್, ಕುಂದಾಪುರ ಡಿವೈಎಸ್ಪಿ ಎಚ್.ಡಿ. ಕುಲಕರ್ಣಿ ಮತ್ತಿತರು ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.ಪೊಲೀಸರ ಸೇವೆ ಸ್ಮರಿಸುವುದು ಸಮಾಜದ ಕರ್ತವ್ಯ - ನ್ಯಾ. ಗಂಗಣ್ಣನವರ್
ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ ಕೇಂದ್ರಸ್ಥಾನದಲ್ಲಿ ಆಯೋಜಿಸಲಾದ ಪೊಲೀಸ್ ಹುತಾತ್ಮ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ ಸ್ಮಾರಕಕ್ಕೆ ಗೌರವ
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.