ಉಡುಪಿ: ಕರ್ನಾಟಕ ರಕ್ಷಣಾ ವೇದಿಕೆ ಆಟಿ ಅಮವಾಸ್ಯೆ ಕಷಾಯ ವಿತರಣೆ

| Published : Jul 25 2025, 01:12 AM IST

ಸಾರಾಂಶ

ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಘಟಕದ ವತಿಯಿಂದ ಆಟಿ ಅಮಾವಾಸ್ಯೆಯ ಪ್ರಯುಕ್ತ ಸಾರ್ವಜನಿಕರಿಗೆ ಆಟಿ ಕಷಾಯ ವಿತರಣಾ ಕಾರ್ಯಕ್ರಮವು ನಗರದ ಸರ್ವಿಸ್ ಬಸ್ ನಿಲ್ದಾಣದ ಬಳಿಯಿರುವ ಕ್ಲಾಕ್ ಟವರ್ ಬಳಿ ಗುರುವಾರ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಘಟಕದ ವತಿಯಿಂದ ಆಟಿ ಅಮಾವಾಸ್ಯೆಯ ಪ್ರಯುಕ್ತ ಸಾರ್ವಜನಿಕರಿಗೆ ಆಟಿ ಕಷಾಯ ವಿತರಣಾ ಕಾರ್ಯಕ್ರಮವು ನಗರದ ಸರ್ವಿಸ್ ಬಸ್ ನಿಲ್ದಾಣದ ಬಳಿಯಿರುವ ಕ್ಲಾಕ್ ಟವರ್ ಮುಂಭಾಗದಲ್ಲಿ ಗುರುವಾರ ಮುಂಜಾನೆ ಹಮ್ಮಿಕೊಳ್ಳಲಾಗಿತ್ತು. ವೇದಿಕೆ ಜಿಲ್ಲಾಧ್ಯಕ್ಷ ಪ್ರಭಾಕರ ಪೂಜಾರಿ ನೇತೃತ್ವ ವಹಿಸಿದ್ದರು.

ವೇದಿಕೆಯವರ ಆಹ್ವಾನದ ಮೇರೆಗೆ ಕಾರ್ಯಕ್ರಮಕ್ಕೆ ಭೇಟಿ ನೀಡಿದ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಅವರು ಆಗಮಿಸಿದ ಸಾರ್ವಜನಿಕರಿಗೆ ಆಟಿ ಕಷಾಯ ವಿತರಿಸಿ, ಇಂತಹ ಉತ್ತಮ ಕಾರ್ಯಕ್ರಮವನ್ನು ಆಯೋಜಿಸಿದ್ದ ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು.ಈ ಸಂದರ್ಭ ಮಾಂಡೋವಿ ಬಿಲ್ಡರ್ಸ್‌ ಮುಖ್ಯಸ್ಥ ಜೇಸನ್ ಡಯಾಸ್, ವೇದಿಕೆಯ ಉಡುಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಅನಿಲ್ ಪೂಜಾರಿ ಹಾಗೂ ಸಾಬೂದ್ದೀನ್, ಪ್ರಧಾನ ಸಂಚಾಲಕ ಕಿರಣ್ ಪಿಂಟೋ, ಜೊತೆ ಕಾರ್ಯದರ್ಶಿಗಳಾದ ಮಜೀದ್, ಜಿಲ್ಲಾ ಮಹಿಳಾ ಸದಸ್ಯರಾದ ಜಯಶ್ರೀ ಸುವರ್ಣ, ಜಿಲ್ಲಾ ಸದಸ್ಯರಾದ ಅಜರುದ್ದೀನ್, ನಾಗಲಕ್ಷ್ಮೀ ಹಾಗೂ ಪೂರ್ಣಿಮಾ ಉಪಸ್ಥಿತರಿದ್ದರು.