ಉಡುಪಿ: ಉಡುಪಿ ಶ್ರೀ ಕೃಷ್ಣಮಠಕ್ಕೆ ಬರುವ ಯಾತ್ರಾರ್ಥಿಗಳು ಮತ್ತು ಭಕ್ತರಿಗೆ ಸರಿದಿ ಸಾಲಿನಲ್ಲಿ ಬಿಸಿಲು ಮತ್ತು ಮಳೆಯಿಂದ ರಕ್ಷಣೆ ನೀಡುವುದಕ್ಕೆ, ನಿರಾಯಸವಾಗಿ ಕೃಷ್ಣನ ದರ್ಶನ ಪಡೆಯುವುದಕ್ಕೆ ಅನುಕೂಲವಾಗುವಂತೆ ಶ್ರೀ ರಥಬೀದಿ- ರಾಜಾಂಗಣ ರಾಜ ಮಾರ್ಗದಲ್ಲಿ ನೂತನವಾಗಿ ನವೀಕರಿಸಲಾದ ಸರತಿಸಾಲು-ಮೇಲ್ಛಾವಣಿ ವ್ಯವಸ್ಥೆ ಹಾಗೂ ವಿಐಪಿ ದರ್ಶನ ಹಾಗೂ ಸ್ಥಳೀಯ ಭಕ್ತರಿಗಾಗಿ ಐಡಿ ಆಧರಿತ ಪ್ರವೇಶ ವ್ಯವಸ್ಥೆಯನ್ನು ಮಂಗಳವಾರ ಉದ್ಘಾಟಿಸಲಾಯಿತು.

ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನತೀರ್ಥ ಸ್ವಾಮೀಜಿ, ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು, ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಹಾಗೂ ಅದಮಾರು ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ, ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೆಕಾರು ಹಾಗೂ ಉಭಯ ಮಠಗಳ ಶಿಷ್ಯ ವರ್ಗದವರು ಉಪಸ್ಥಿತರಿದ್ದರು.