ಸಾರಾಂಶ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಕೇಂದ್ರ ಸಮಿತಿ ಧರ್ಮಸ್ಥಳ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗಳ ಸಹಯೋಗದಲ್ಲಿ ಉಡುಪಿ ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಪುತ್ತಿಗೆ ಆಶ್ರಯದಲ್ಲಿ ನ.11ರಿಂದ 30ರ ವರೆಗೆ ಕೃಷ್ಣಮಠದ ಪರಿಸರದಲ್ಲಿ ನಡೆಯುವ ‘ಲಕ್ಷ ಕಂಠ ಗೀತ ಗಾಯನ’ ಹಾಗೂ ‘ಭಜನೋತ್ಸವ’ ಕುರಿತು ಶ್ರೀ ಪುತ್ತಿಗೆ ಮಠದ ದಿವಾನ ನಾಗರಾಜ ಆಚಾರ್ಯರ ನೇತೃತ್ವದಲ್ಲಿ ಸಮಾಲೋಚನಾ ಸಭೆ ನಡೆಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಕೇಂದ್ರ ಸಮಿತಿ ಧರ್ಮಸ್ಥಳ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗಳ ಸಹಯೋಗದಲ್ಲಿ ಉಡುಪಿ ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಪುತ್ತಿಗೆ ಆಶ್ರಯದಲ್ಲಿ ನ.11ರಿಂದ 30ರ ವರೆಗೆ ಕೃಷ್ಣಮಠದ ಪರಿಸರದಲ್ಲಿ ನಡೆಯುವ ‘ಲಕ್ಷ ಕಂಠ ಗೀತ ಗಾಯನ’ ಹಾಗೂ ‘ಭಜನೋತ್ಸವ’ ಕುರಿತು ಶ್ರೀ ಪುತ್ತಿಗೆ ಮಠದ ದಿವಾನ ನಾಗರಾಜ ಆಚಾರ್ಯರ ನೇತೃತ್ವದಲ್ಲಿ ಸಮಾಲೋಚನಾ ಸಭೆ ನಡೆಯಿತು.ಈ ಸಂದರ್ಭ ಮಠದ ಸಾಂಸ್ಕೃತಿಕ ಕಾರ್ಯದರ್ಶಿ ರಮೇಶ್ ಭಟ್, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬಸ್ರೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ ಜಿಲ್ಲಾ ನಿರ್ದೇಶಕ ನಾಗರಾಜ ಶೆಟ್ಟಿ, ಭಜನಾ ಶಿಕ್ಷಕಿ ವಿದುಷಿ ಉಷಾ ಹೆಬ್ಬಾರ್, ಭಜನಾ ಪರಿಷತ್ ಉಡುಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ಹಾಗೂ ಉಡುಪಿ ಜಿಲ್ಲಾ ಸಮನ್ವಯಾಧಿಕಾರಿ ರವೀಂದ್ರ ಎಸ್. ಉಪಸ್ಥಿತರಿದ್ದರು.ನ.8ರಂದು ಉದ್ಘಾಟನೆಗೊಂಡು ನಿತ್ಯ ಸಂಜೆ ಗಂಟೆ 4ರಿಂದ 6ರ ವರೆಗೆ ಜಿಲ್ಲೆಯ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ನ.30ರಂದು 40- 50 ಸಾವಿರ ಭಕ್ತರು ಸಮಾಗಮದೊಂದಿಗೆ ದೇಶದ ಪ್ರಮುಖ ಗಣ್ಯರು, ಸಂತರು, ಧಾರ್ಮಿಕ ಮುಖಂಡರ ಉಪಸ್ಥಿತಿಯಲ್ಲಿ ಈ ವಿನೂತನ ಕಾರ್ಯಕ್ರಮದ ಸಮಾರೋಪ ನಡೆಯಲಿದೆ.