ಉಡುಪಿ: ವಿಶ್ವ ಸ್ತನ್ಯಪಾನ ಸಪ್ತಾಹಕ್ಕೆ ಚಾಲನೆ

| Published : Aug 03 2024, 12:38 AM IST

ಸಾರಾಂಶ

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಉಡುಪಿ ನಗರದ ತಾಯಿ ಮಕ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹಕ್ಕೆ ಜಿಲ್ಲಾ ಸರ್ಜನ್ ಡಾ. ಅಶೋಕ್ ಎಚ್. ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ನ್ಯೂ ಸಿಟಿ ಸ್ಕೂಲ್ ಆಂಡ್ ಕಾಲೇಜ್ ಆಫ್ ನರ್ಸಿಂಗ್ ಉಡುಪಿ ಇವುಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುರುವಾರ ನಗರದ ತಾಯಿ ಮಕ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹಕ್ಕೆ ಜಿಲ್ಲಾ ಸರ್ಜನ್ ಡಾ. ಅಶೋಕ್ ಎಚ್. ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ತನ್ಯಪಾನ ತಾಯಿ ಹಾಗೂ ಮಗುವಿನ ಆರೋಗ್ಯದ ದೃಷ್ಟಿಯಿಂದ ಬಹುಮುಖ್ಯ. ಸ್ತನ್ಯಪಾನದಿಂದ ಪ್ರತೀವರ್ಷ ವಿಶ್ವದಾದ್ಯಂತ 8 ಲಕ್ಷ ಮಕ್ಕಳ ಜೀವ ಉಳಿಸಲು ಸಾಧ್ಯತೆ ಇದ್ದು, ಮಕ್ಕಳಲ್ಲಿ ರೋಗನಿರೊಧಕ ಶಕ್ತಿ ಹೆಚ್ಚಿಸಲು ಸ್ತನ್ಯಪಾನ ಅವಶ್ಯಕ ಎಂದರು.

ಆಸ್ಪತ್ರೆಯ ಮಕ್ಕಳ ತಜ್ಞ ಡಾ. ಅಮರನಾಥ್ ಶಾಸ್ತ್ರಿ ಉಪನ್ಯಾಸ ನೀಡಿದರು. ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಜ್ಯೋತ್ಸ್ನಾ ಬಿ.ಕೆ, ಪ್ರಾಸ್ತಾವಿಕವಾಗಿ ಮಾತನಾಡಿದರು. ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರಾಜ್ ಗೋಪಾಲ್ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಆಸ್ಪತ್ರೆಯ ಶುಶ್ರೂಷಣಾ ಅಧೀಕ್ಷಕಿ ಅರುಣ ಪ್ರತಿಜ್ಞಾವಿಧಿ ಭೋಧಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಪ್ರಸೂತಿ ತಜ್ಞೆ ಡಾ.ಉಷಾ ಭಟ್, ಮಕ್ಕಳ ತಜ್ಞ ಡಾ. ಸಂದೀಪ್, ಡಾ.ಮಹಾದೇವ್ ಭಟ್, ಅರವಳಿಕೆ ತಜ್ಞ ಡಾ. ಗಣಪತಿ ಹೆಗ್ಡೆ, ನ್ಯೂಸಿಟಿ ಕಾಲೇಜಿನ ಪ್ರಾಧ್ಯಾಪಕಿ ಸೋನಿ ಸುಪ್ರೀಯ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರೀತಂ ಬಿ.ಕೆ., ಡಿಪಿಸಿ ಸುಧೀಂದ್ರ, ಐ.ಎಫ್.ವಿ ಹರ್ಷ, ದೀಪಶ್ರೀ, ಆರೋಗ್ಯ ಸುರಕ್ಷಾಧಿಕಾರಿ ಪ್ರತಿಮಾ, ಆಸ್ಪತ್ರೆಯ ಸಿಬ್ಬಂದಿ, ಗರ್ಭಿಣಿಯರು, ಬಾಣಂತಿಯರು, ಮಕ್ಕಳ ತಾಯಂದಿರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಎಚ್. ಸ್ವಾಗತಿಸಿದರು. ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ನಿರೂಪಿಸಿದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸತೀಶ್ ರಾವ್ ವಂದಿಸಿದರು.