ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ, ಮಣಿಪಾಲ ಆಸ್ಪತ್ರೆಯೂ ಸೇರಿದಂತೆ ಜಿಲ್ಲೆಯಾದ್ಯಂತ ನೆಟ್‌ವರ್ಕ್ ಸಮಸ್ಯೆ ಇದೆ. ಆದ್ದರಿಂದ ಜಿಲ್ಲೆಯಾದ್ಯಂತ ಇರುವ ಬಿಎಸ್ಎನ್ಎಲ್. ಸ್ಥಾವರಗಳನ್ನು 3 ಜಿಯಿಂದ 4 ಜಿಗೆ ಉನ್ನತೀಕರಿಸಿ ಗ್ರಾಹಕರಿಗೆ ಉತ್ತಮ ಸೇವೆ ನೀಡಿ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚಿಸಿದರು.

ಉಡುಪಿ: ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ, ಮಣಿಪಾಲ ಆಸ್ಪತ್ರೆಯೂ ಸೇರಿದಂತೆ ಜಿಲ್ಲೆಯಾದ್ಯಂತ ನೆಟ್‌ವರ್ಕ್ ಸಮಸ್ಯೆ ಇದೆ. ಆದ್ದರಿಂದ ಜಿಲ್ಲೆಯಾದ್ಯಂತ ಇರುವ ಬಿಎಸ್ಎನ್ಎಲ್. ಸ್ಥಾವರಗಳನ್ನು 3 ಜಿಯಿಂದ 4 ಜಿಗೆ ಉನ್ನತೀಕರಿಸಿ ಗ್ರಾಹಕರಿಗೆ ಉತ್ತಮ ಸೇವೆ ನೀಡಿ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚಿಸಿದರು.ಅವರು ಬುಧವಾರ ಜಿಪಂ ಸಭಾಂಗಣದಲ್ಲಿ ನಡೆದ ಬಿಎಸ್ಎನ್ಎಲ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಕಾಪು, ಮಾಾರಣಕಟ್ಟೆಯಂತಹ ಪ್ರವಾಸಿ ತಾಣಗಳ‍ಲ್ಲಿಯೂ ನೆಟ್‌ವರ್ಕ್ ಸಮಸ್ಯೆಯ ದೂರುಗಳು ಬಂದಿವೆ. ಈ ಸಮಸ್ಯೆಗೆ ಸ್ಥಾವರಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕು, ಜಿಲ್ಲೆಯ ಎಲ್ಲಾ ಸ್ಥಾವರಗಳಿಗೆ ಡಿ.ಜಿ. ಸೆಟ್‌ಗಳನ್ನು ಅಳವಡಿಸಬೇಕು, ಅವುಗಳಿಗೆ ನಿರಂತರ ವಿದ್ಯುತ್ ಪೂರೈಕೆಯಾಗುವಂತೆ ನೋಡಿಕೊಳ್ಳಬೇಕು. ಅಗತ್ಯವಿರುವಲ್ಲಿ ಹೆಚ್ಚುವರಿ ಬ್ಯಾಟರಿ ಅಥವಾ ವಿದ್ಯುತ್ ಸಂಪರ್ಕ ಇಲ್ಲದಿದ್ದಲ್ಲಿ ಸೋಲಾರ್ ವಿದ್ಯುತ್ ಬ್ಯಾಟರಿಗಳ ಅಳವಡಿಸಬೇಕು ಎಂದವರು ಹೇಳಿದರು.ಹೊಸ ಟವರ್‌ಗಳ ನಿರ್ಮಾಣಕ್ಕೆ ಜಿಲ್ಲಾಡಳಿತದಿಂದ 39 ನಿವೇಶನಗಳನ್ನು ಹಂಚಿಕೆ ಮಾಡಿದೆ. ಅಲ್ಲಿ ತಕ್ಷಣ ಟವರ್ ನಿರ್ಮಾಣ ಆರಂಭಿಸಬೇಕು, ಪೆರ್ಡೂರಿನ ಕುಕ್ಕುಂಡಿಯ ನಿವೇಶನದಲ್ಲಿ ಮರಗಳಿದ್ದು, ಅರಣ್ಯ ಇಲಾಖೆ ತಕ್ಷಣ ಮರಗಳನ್ನು ತೆರವು ಮಾಡಬೇಕು ಎಂದವರು ಅಧಿಕಾರಿಗಳಿಗೆ ಸೂಚಿದರು.ಇನ್ನು ಮುಂದೆ ಪ್ರತಿ ತಿಂಗಳು ಬಿಎಸ್‌ಎನ್‌ಎಲ್‌ ಬಗ್ಗೆ ಸಭೆ ನಡೆಸಲಿದ್ದೇನೆ. ಮುಂದಿನ ಸಭೆಯೊಳಗೆ ಎಲ್ಲಾ ಸಮಸ್ಯೆಗಳು ಇತ್ಯರ್ಥವಾಗುವಂತೆ ಕ್ರಮ ವಹಿಸಬೇಕು ಎಂದವರು ತಾಕೀತು ಮಾಡಿದರು.ಸಭೆಯಲ್ಲಿ ಬಿಎಸ್ಎನ್ಎಲ್ ಬೆಂಗಳೂರು ವಿಭಾಗದ ಸಿಜಿಎಂ ಸುಕುಮಾರನ್ ಎನ್.ಕೆ., ಪಿಜಿಎಂ ಬಿ. ವೆಂಕಟೇಶ್ವರಲು, ಮಂಗಳೂರು ಜಿಎಂ ಹೇಮಂತ್ ಎಸ್. ಬಿ., ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯಕ್ ಉಪಸ್ಥಿತರಿದ್ದರು.