ಸಾರಾಂಶ
ಸಮರ್ಪಕ ಚರಂಡಿ ವ್ಯವಸ್ಥೆ, ಮಲ್ಪೆ ಕರಾವಳಿ ನಡುವಿನ ನಿರ್ಮಾಣ ಹಂತದ ರಸ್ತೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ತಕ್ಷಣ ಸೂಕ್ತ ವ್ಯವಸ್ಥೆ ಮಾಡುವಂತೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳಿಗೆ ಶಾಸಕ ಯಶ್‌ಪಾಲ್ ಸುವರ್ಣ ಸೂಚನೆ ನೀಡಿದರು.
ಕನ್ನಡಪ್ರಭ ವಾರ್ತೆ ಉಡುಪಿ
ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ನಗರದ ಬನ್ನಂಜೆಯ ಕೆ.ಎಸ್. ಆರ್. ಟಿ. ಸಿ. ಬಸ್ ನಿಲ್ದಾಣ, ಕರಾವಳಿ ಜಂಕ್ಷನ್, ಆದಿ ಉಡುಪಿ , ಕಲ್ಮಾಡಿ ಹೊಸ ಸೇತುವೆ ಪ್ರದೇಶಗಳಿಗೆ ಶಾಸಕ ಯಶ್‌ಪಾಲ್ ಸುವರ್ಣ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.ಸಮರ್ಪಕ ಚರಂಡಿ ವ್ಯವಸ್ಥೆ, ಮಲ್ಪೆ ಕರಾವಳಿ ನಡುವಿನ ನಿರ್ಮಾಣ ಹಂತದ ರಸ್ತೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ತಕ್ಷಣ ಸೂಕ್ತ ವ್ಯವಸ್ಥೆ ಮಾಡುವಂತೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಬನ್ನಂಜೆ ವಾರ್ಡ್ ನಗರಸಭಾ ಸದಸ್ಯೆ ಸವಿತಾ ಹರೀಶ್ ರಾಮ್, ಶಿರಿಬೀಡು ವಾರ್ಡ್ ಸದಸ್ಯ ಟಿ.ಜಿ. ಹೆಗ್ಡೆ, ಕಲ್ಮಾಡಿ ವಾರ್ಡ್ ಸದಸ್ಯ ಸುಂದರ ಕಲ್ಮಾಡಿ, ಪಕ್ಷದ ಪ್ರಮುಖರಾದ ಹರೀಶ್ ರಾಮ್, ಲಕ್ಷ್ಮೀಶ ಮಲ್ಪೆ, ರಾಷ್ಟೀಯ ಹೆದ್ದಾರಿ ಇಲಾಖೆಯ ಎಂಜಿನಿಯರ್ ಮಂಜುನಾಥ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.