ಉಡುಪಿ: ಕಳೆದ 40 ದಿನಗಳಿಂದ ನಡೆಯುತ್ತಿರುವ ಪರವಾನಗಿ ಭೂಮಾಪಕರ ಮುಷ್ಕರದಿಂದ ಕಂದಾಯ ಇಲಾಖೆಗೆ ಸಂಬಂಧಿತ ಕಾರ್ಯಗಳು ಸ್ಥಗಿತಗೊಂಡು ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ತಕ್ಷಣ ಕ್ರಮವಹಿಸುವಂತೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.ರಾಜ್ಯದಾದ್ಯಂತ ಪರವಾನಗಿ ಭೂಮಾಪಕರು ಕಳೆದ 40 ದಿನಗಳಿಂದ ಮುಷ್ಕರದಲ್ಲಿ ತೊಡಗಿರುವುದರಿಂದ ಭೂಮಾಪನ, ಸರ್ವೇ, ಪಹಣಿ ತಿದ್ದುಪಡಿ, ಹದ್ದುಬಸ್ತು, ಖಾತೆ ಬದಲಾವಣೆ ಸೇರಿದಂತೆ ಜಮೀನು ಸಂಬಂಧಿತ ಅನೇಕ ಕಾರ್ಯಗಳು ಸಂಪೂರ್ಣವಾಗಿ ಸ್ಥಗಿತಗೊಂಡಿವೆ. ಇದರಿಂದ ರೈತರು, ಬಡಜನರು, ಮನೆ ನಿರ್ಮಾಣಕ್ಕೆ ಸಾಲ ಪಡೆಯುವವರು ಹಾಗೂ ಸಾಮಾನ್ಯ ನಾಗರಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.ರಾಜ್ಯಾದ್ಯಂತ ಸುಮಾರು 6,000 ಪರವಾನಗಿ ಭೂಮಾಪಕರು, ಉಡುಪಿ ಜಿಲ್ಲೆಯಲ್ಲಿ 118 ಮಂದಿ ಹಾಗೂ ಉಡುಪಿ ತಾಲೂಕಿನಲ್ಲಿ 22 ಮುಷ್ಕರದಲ್ಲಿ ನಿರತರಾಗಿದ್ದಾರೆ. ಸಾರ್ವಜನಿಕರು ದಿನನಿತ್ಯ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗೆಯೇ ಉಡುಪಿ ಜಿಲ್ಲೆಯಲ್ಲಿ ಸಾವಿರಕ್ಕೂ ಹೆಚ್ಚು ಭೂಮಾಪನ ಅರ್ಜಿಗಳ ವಿಲೇವಾರಿ ಬಾಕಿ ಇದ್ದು ವಿಶೇಷವಾಗಿ ಉಡುಪಿ ತಾಲೂಕಿನಲ್ಲಿ 350ಕ್ಕೂ ಅಧಿಕ ಭೂಮಾಪನ ಅರ್ಜಿಗಳು ಬಾಕಿಯಾಗಿದೆ. ಈ ಗಂಭೀರ ಸಮಸ್ಯೆ ತಕ್ಷಣ ಪರಿಗಣಿಸಿ ಪರವಾನಗಿ ಭೂಮಾಪಕರೊಂದಿಗೆ ಮಾತುಕತೆ ನಡೆಸಿ, ಸದ್ರಿಯವರ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸಿ, ಮುಷ್ಕರವನ್ನು ಶೀಘ್ರ ಅಂತ್ಯಗೊಳಿಸುವಂತೆ ಕ್ರಮ ಕೈಗೊಳ್ಳಬೇಕು ಹಾಗೆಯೇ ಸಾರ್ವಜನಿಕ ಹಿತದೃಷ್ಟಿಯಿಂದ ಭೂಮಾಪನ ಸೇವೆಗಳು ಮರುಪ್ರಾರಂಭವಾಗುವಂತೆ ತುರ್ತು ಮಧ್ಯಪ್ರವೇಶ ಮಾಡಿ ಜನರ ಸಂಕಷ್ಟ ನಿವಾರಿಸುವಂತೆ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.
ಭೂಮಾಪಕರ ಮುಷ್ಕರ, ಸಮಸ್ಯೆ ಪರಿಹಾರ: ಸಿಎಂಗೆ ಯಶ್‌ಪಾಲ್ ಮನವಿ
ಕಳೆದ 40 ದಿನಗಳಿಂದ ನಡೆಯುತ್ತಿರುವ ಪರವಾನಗಿ ಭೂಮಾಪಕರ ಮುಷ್ಕರದಿಂದ ಕಂದಾಯ ಇಲಾಖೆಗೆ ಸಂಬಂಧಿತ ಕಾರ್ಯಗಳು ಸ್ಥಗಿತಗೊಂಡು ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ತಕ್ಷಣ ಕ್ರಮವಹಿಸುವಂತೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.