ಉಡುಪಿ ನಗರಸಭೆಯ ಕರ್ವಾಲು ತ್ಯಾಜ್ಯ ಘಟಕ ಬೆಂಕಿಗಾಹುತಿ

| Published : Oct 06 2025, 01:01 AM IST

ಉಡುಪಿ ನಗರಸಭೆಯ ಕರ್ವಾಲು ತ್ಯಾಜ್ಯ ಘಟಕ ಬೆಂಕಿಗಾಹುತಿ
Share this Article
  • FB
  • TW
  • Linkdin
  • Email

ಸಾರಾಂಶ

ಆಕಸ್ಮಿಕವಾಗಿ ತ್ಯಾಜ್ಯ ಸಂಸ್ಕರಣಾ ಕಟ್ಟಡಕ್ಕೆ ಬೆಂಕಿ ತಗುಲಿದ್ದು, ನೋಡು ನೋಡುತ್ತಿದ್ದಂತೆ ಇಡೀ ಕಟ್ಟಡವನ್ನು ಅಗ್ನಿಯ ಕೆನ್ನಾಲಿಗೆ ಆವರಿಸಿಕೊಂಡಿದೆ. ಘಟಕದೊಳಗಿದ್ದ ಅಪಾರ ಪ್ರಮಾಣದ ಯಂತ್ರ ಮತ್ತು ಇತರ ಸೊತ್ತುಗಳು ಬೆಂಕಿಗಾಹುತಿಯಾಗಿದೆ. ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದ ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿ ನಂದಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಇಲ್ಲಿನ ಅಲೆವೂರು ಗ್ರಾಮದ ಕರ್ವಾಲುನಲ್ಲಿರುವ ಉಡುಪಿ ನಗರಸಭೆಯ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಶನಿವಾರ ಮುಂಜಾನೆ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಆಕಸ್ಮಿಕವಾಗಿ ತ್ಯಾಜ್ಯ ಸಂಸ್ಕರಣಾ ಕಟ್ಟಡಕ್ಕೆ ಬೆಂಕಿ ತಗುಲಿದ್ದು, ನೋಡು ನೋಡುತ್ತಿದ್ದಂತೆ ಇಡೀ ಕಟ್ಟಡವನ್ನು ಅಗ್ನಿಯ ಕೆನ್ನಾಲಿಗೆ ಆವರಿಸಿಕೊಂಡಿದೆ. ಘಟಕದೊಳಗಿದ್ದ ಅಪಾರ ಪ್ರಮಾಣದ ಯಂತ್ರ ಮತ್ತು ಇತರ ಸೊತ್ತುಗಳು ಬೆಂಕಿಗಾಹುತಿಯಾಗಿದೆ. ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದ ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿ ನಂದಿಸಿದರು. ಇದು ಉಡುಪಿ ನಗರಸಭೆಗೆ ಸೇರಿದ ತ್ಯಾಜ್ಯ ವಿಲೇವಾರಿ ಘಟಕವಾಗಿದ್ದು, ಕಸ ಸಂಗ್ರಹಿಸಿ ಸಂಸ್ಕರಿಸುವ ಕಾರ್ಯ ನಡೆಯುತ್ತದೆ. ಈ ಅವಘಢದಿಂದ ಕೋಟ್ಯಾಂತರ ರು, ಮೌಲ್ಯದ ಯಾಂತ್ರಿಕ ಉಪಕರಣಗಳು ನಾಶವಾಗಿವೆ. ರಾತ್ರಿ ಘಟಕದಲ್ಲಿ ಯಾರೂ ಕಾರ್ಮಿಕರಿಲ್ಲದಿದ್ದುದರಿಂದ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಬೆಂಕಿಗೆ ಕಾರಣ ಪತ್ತೆಯಾಗಿಲ್ಲ