ಸಾರಾಂಶ
ಪರ್ಯಾಯ ಶ್ರೀ ಪುತ್ತಿಗೆ ಮಠ ವತಿಯಿಂದ ಒಂದು ತಿಂಗಳು ಕಾಲ ವೈವಿಧ್ಯಮಯವಾಗಿ ನಡೆಯಲಿರುವ ಶ್ರೀ ಕೃಷ್ಣ ಜನ್ಮಾಷ್ಟಮಿ ಮಾಸೋತ್ಸವವನ್ನು ಶ್ರೀಗಳೆಲ್ಲಾ ಸೇರಿ ವೇದಿಕೆಯಲ್ಲಿ ಮೊಸರುಕುಡಿಕೆಯನ್ನು ಒಡೆದು ಚಾಲನೆ ನೀಡಿದರು.
ಕನ್ನಡಪ್ರಭ ವಾರ್ತೆ ಉಡುಪಿ
ಕೃಷ್ಣಮಠದ ರಾಜಾಂಗಣದಲ್ಲಿ ಗುರುವಾರ ಪರ್ಯಾಯ ಶ್ರೀ ಪುತ್ತಿಗೆ ಮಠ ವತಿಯಿಂದ ಒಂದು ತಿಂಗಳು ಕಾಲ ವೈವಿಧ್ಯಮಯವಾಗಿ ನಡೆಯಲಿರುವ ಶ್ರೀ ಕೃಷ್ಣ ಜನ್ಮಾಷ್ಟಮಿ ಮಾಸೋತ್ಸವವನ್ನು ವಿಶಿಷ್ಟ ರೀತಿಯಲ್ಲಿ ಉದ್ಘಾಟಿಸಲಾಯಿತು.ಶ್ರೀ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು, ಶ್ರೀ ಭಂಡಾರಕೇರಿ ಮಠದ ಶ್ರೀವಿದ್ಯೇಶ ತೀರ್ಥ ಶ್ರೀಪಾದರು, ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು, ಶ್ರೀ ಪುತ್ತಿಗೆ ಮಠದ ಕಿರಿಯ ಶ್ರೀಪಾದರಾದ ಸುಶ್ರೀಂದ್ರ ತೀರ್ಥ ಶ್ರೀಪಾದರು ದೀಪ ಬೆಳಗಿಸಿ ಮಾಸೋತ್ಸವಕ್ಕೆ ಚಾಲನೆ ನೀಡಿದರು.
ನಂತರ ಶ್ರೀಗಳೆಲ್ಲಾ ಸೇರಿ ವೇದಿಕೆಯಲ್ಲಿ ಮೊಸರುಕುಡಿಕೆಯನ್ನು ಒಡೆದು ಮಾಸೋತ್ಸವಕ್ಕೆ ಅಧಿಕೃತ ಚಾಲನೆ ನೀಡಿದರು.ಮುಖ್ಯ ಅತಿಥಿಗಳಾಗಿ ಮಣಿಪಾಲ ಮಾಹೆಯ ಕುಲಾಧಿಪತಿ ಡಾ.ಎಚ್.ಎಸ್. ಬಲ್ಲಾಳ್, ಮಾಜಿ ಶಾಸಕ ಕೆ. ರಘುಪತಿ ಭಟ್, ಲಾಲಾಜಿ ಮೆಂಡನ್, ಜೆಡಿಎಸ್ ಜಿಲ್ಲಾಧ್ಯಕ್ಷ ಬಾಲಾಜಿ ಯೋಗೀಶ್ ಶೆಟ್ಟಿ, ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ, ಪದ್ಮಶಾಲಿ ನೇಕಾರರ ಪ್ರತಿಷ್ಠಾನದ ಅದ್ಯಕ್ಷ ರತ್ನಾಕರ ಇಂದ್ರಾಳಿ, ನಿವೃತ್ತ ಪ್ರಾಂಶುಪಾಲ ಪ್ರೊ.ರಾಧಾಕೃಷ್ಣ ಹಾಗೂ ಅನೇಕ ಗಣ್ಯರ ಉಪಸ್ಥಿತರಿದ್ದರು.