ಸಾರಾಂಶ
ಪರೀಕದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಸೋಮವಾರ ರಾಷ್ಟ್ರೀಯ ವೈದ್ಯರ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಇಲ್ಲಿನ ಪರ್ಕಳ ಸಮೀಪದ ಪರೀಕದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಸೋಮವಾರ ರಾಷ್ಟ್ರೀಯ ವೈದ್ಯರ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಉದ್ಯಾವರ ಆಯುರ್ವೇದ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ . ನಾಗರಾಜ್, ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಅವರು ತಮ್ಮಭಾಷಣದಲ್ಲಿ ವೈದ್ಯರ ಕರ್ತವ್ಯದ ಬಗ್ಗೆ ತಿಳಿಸುತ್ತಾ ಆಯುರ್ವೇದ ಮತ್ತು ಪ್ರಕೃತಿ ಚಿಕಿತ್ಸೆ ಧನ್ವಂತರಿ ಮತ್ತು ಪತಂಜಲಿ ತತ್ವದ ಅನುಸರಣೆಯಲ್ಲಿ ಮುನ್ನಡೆಯಬೇಕು ಎಂದು ತಿಳಿಸಿದರು. ರೋಗಿಗಳಿಗೆ ಕಾಯಿಲೆಗೆ ತಕ್ಕ ಪ್ರಾಮಾಣಿಕ ಚಿಕಿತ್ಸೆಯನ್ನು ನೀಡಿದಲ್ಲಿ ರೋಗಿಯೂ ಗುಣಮುಖರಾಗುವುದಲ್ಲದೆ, ಆಸ್ಪತ್ರೆಯಲ್ಲಿರುವ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿದಾಗಲೇ ವೈದ್ಯರ ವೃತ್ತಿಗೂ ಹೆಸರು ಬರಲು ಸಾಧ್ಯ ಎಂದರು.ಸೌಖ್ಯವನದ ಮುಖ್ಯ ವೈದ್ಯಾಧಿಕಾರಿ ಡಾ. ಗೋಪಾಲ ಪೂಜಾರಿ ಅವರು ಉಪಸ್ಥಿತರಿದ್ದು ಶುಭ ಹಾರೈಸಿದರು. ಸಂಸ್ಥೆಯ ವತಿಯಿಂದ ಡಾ. ನಾಗರಾಜ್ ಅವರನ್ನ ಗೌರವಿಸಲಾಯಿತು.
ಸಂಸ್ಥೆಯ ಎಲ್ಲ ವೈದ್ಯಾಧಿಕಾರಿಗಳು ಮತ್ತು ಕಿರಿಯ ವೈದ್ಯರನ್ನು ಉಡುಗೊರೆ ನೀಡಿ ಗುರುತಿಸಲಾಯಿತು. ಆಸ್ಪತ್ರೆಯ ವ್ಯವಸ್ಥಾಪಕ ಪ್ರವೀಣ್ ಕುಮಾರ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.