ಇಲ್ಲಿನ ಉದ್ಯಾವರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಕ್ರೀಡಾ ವಿಭಾಗವು ಆಂತರಿಕ ಗುಣಮಟ್ಟ ಕ್ಷಮತೆ ಘಟಕದ ಸಹಯೋಗದಲ್ಲಿ ರಾಷ್ಟ್ರೀಯ ಮಟ್ಟದ ನಿರಂತರ ವೈದ್ಯಕೀಯ ಶಿಕ್ಷಣ (ಸಿಎಂಇ) ಕಾರ್ಯಾಗಾರವನ್ನು ಆಯೋಜಿಸಿತು.
ಉಡುಪಿ: ಇಲ್ಲಿನ ಉದ್ಯಾವರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಕ್ರೀಡಾ ವಿಭಾಗವು ಆಂತರಿಕ ಗುಣಮಟ್ಟ ಕ್ಷಮತೆ ಘಟಕದ ಸಹಯೋಗದಲ್ಲಿ ರಾಷ್ಟ್ರೀಯ ಮಟ್ಟದ ನಿರಂತರ ವೈದ್ಯಕೀಯ ಶಿಕ್ಷಣ (ಸಿಎಂಇ) ಕಾರ್ಯಾಗಾರವನ್ನು ಆಯೋಜಿಸಿತು. ಕಾರ್‍ಯಾಗಾರದಲ್ಲಿ ಆಯುರ್ವೇದ ಮತ್ತು ಆಧುನಿಕ ವೈದ್ಯಕೀಯ ದೃಷ್ಟಿಕೋನಗಳ ಸಮನ್ವಯದ ಮೂಲಕ ಕ್ರೀಡಾ ಕ್ಷೇತ್ರದಲ್ಲಿ ಸಂಭವಿಸುವ ರೋಗ ಮತ್ತು ಗಾಯಗಳಿಗೆ ಸಮಗ್ರ ಚಿಕಿತ್ಸೆ ವಿಧಾನಗಳ ಬಗ್ಗೆ ವಿವರವಾಗಿ ಚರ್ಚಿಸಲಾಯಿತು.
ಸಂಸ್ಥೆಯ ಉಪ ಪ್ರಾಂಶುಪಾಲ ಡಾ. ನಿರಂಜನ್ ರಾವ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು, ಕ್ರೀಡಾ ವೈದ್ಯಕೀಯ ಕ್ಷೇತ್ರದಲ್ಲಿ ಆಯುರ್ವೇದ ಪಂಚಕರ್ಮ ಹಾಗೂ ಭೌತಚಿಕಿತ್ಸೆಯ ಮಹತ್ವದ ಪಾತ್ರವನ್ನು ವಹಿಸುತ್ತದೆ ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಮಮತಾ ಕೆ.ವಿ., ಉಪ ಪ್ರಾಂಶುಪಾಲರಾದ ಡಾ. ನಾಗರಾಜ್ ಎಸ್., ವೈದ್ಯಕೀಯ ಅಧೀಕ್ಷಕ ಡಾ. ಜಯಕೃಷ್ಣ ನಾಯಕ್, ಸ್ನಾತಕೋತ್ತರ ವಿಭಾಗ ಮುಖ್ಯಸ್ಥ ಡಾ. ಶ್ರೀಕಾಂತ್ ಪಿ., ಸ್ನಾತಕ ವಿಭಾಗದ ಮುಖ್ಯಸ್ಥ ಡಾ. ಪೃಥ್ವಿರಾಜ್ ಪುರಾಣಿಕ್, ಸ್ನಾತಕೋತ್ತರ ವಿಭಾಗದ ಸಹಾಯಕ ಡೀನ್ ಡಾ. ರಾಜಲಕ್ಷ್ಮಿ, ಪಠ್ಯೇತರ ಸಮಿತಿಯ ಮುಖ್ಯಸ್ಥೆ ಡಾ. ರಮಾದೇವಿ ಹಾಗೂ ಕ್ರೀಡಾ ವಿಭಾಗದ ಸಹಾಯಕ ಡೀನ್ ಡಾ. ಸುಧೀಂದ್ರ ಮೊಹೆರರ್ ಉಪಸ್ಥಿತರಿದ್ದರು.ಕಾರ್‍ಯಾಗಾರದಲ್ಲಿ ಮೂಡುಬಿದಿರೆಯ ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಡಾ. ಮಧು ಜಿ.ಆರ್.,
ಸಂಸ್ಥೆಯ ಶಲ್ಯಾತಂತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಆರ್. ನಾಯರ್ ತಜ್ಞ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಉಪನ್ಯಾಸಗಳನ್ನು ನೀಡಿದರು. ಡಾ. ಕೊಚುಥ್ರೆಸಿಯಾ ಜೋಸ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಅನೀಶ್ ಅವರು ಸಂವಾದ ಅಧಿವೇಶನವನ್ನು ನಡೆಸಿಕೊಟ್ಟರು. ಡಾ. ಮೊಹಮ್ಮದ್ ಫೈಸಲ್ ಸ್ವಾಗತಿಸಿದರು, ಡಾ. ಮೇಘನಾ ಕಾರ್ಯಕ್ರಮ ನಿರೂಪಿಸಿದರು. ಡಾ. ಸುಶ್ಮಿತಾ ವಂದಿಸಿದರು.