ಸಾರಾಂಶ
ದೊಡ್ಡಣಗುಡ್ಡೆಯ ಡಾ. ಎ. ವಿ. ಬಾಳಿಗ ಸ್ಮಾರಕ ಆಸ್ಪತ್ರೆಯಲ್ಲಿ, ಮುಂಬೈಯ ಕಮಲ್ ಎ. ಬಾಳಿಗ ಚಾರಿಟೇಬಲ್ ಟ್ರಸ್ಟ್ ಮತ್ತು ಒನ್ ಗುಡ್ ಸ್ಟೆಪ್ ಇವುಗಳ ಜಂಟಿ ಆಶ್ರಯದಲ್ಲಿ ನವಜೀವನ ಲೇ ಕೌನ್ಸಿಲರ್ ನ 6ನೇ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭ ನಡೆಯಿತು.
ಕನ್ನಡಪ್ರಭ ವಾರ್ತೆ, ಉಡುಪಿ
ಇಲ್ಲಿನ ದೊಡ್ಡಣಗುಡ್ಡೆಯ ಡಾ. ಎ. ವಿ. ಬಾಳಿಗ ಸ್ಮಾರಕ ಆಸ್ಪತ್ರೆಯಲ್ಲಿ, ಮುಂಬೈಯ ಕಮಲ್ ಎ. ಬಾಳಿಗ ಚಾರಿಟೇಬಲ್ ಟ್ರಸ್ಟ್ ಮತ್ತು ಒನ್ ಗುಡ್ ಸ್ಟೆಪ್ ಇವುಗಳ ಜಂಟಿ ಆಶ್ರಯದಲ್ಲಿ ನವಜೀವನ ಲೇ ಕೌನ್ಸಿಲರ್ ನ 6ನೇ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಎ. ವಿ. ಬಾಳಿಗ ಚಾರಿಟೀಸ್ ಮತ್ತು ಕಮಲ್ ಎ ಬಾಳಿಗ ಚಾರಿಟೇಬಲ್ ಟ್ರಸ್ಟ್‌ನ ಟ್ರಸ್ಟಿಗಳಾದ ಡಾ. ಆರ್. ವಿ. ಬಾಳಿಗಾ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಬ್ಯಾಂಕ್ ಅಧಿಕಾರಿ ರಾಘವೇಂದ್ರ ರಾವ್ ಆಗಮಿಸಿದ್ದರು. ವೇದಿಕೆಯಲ್ಲಿ ಆಸ್ಪತ್ರೆಯ ಮನೋ ವೈದ್ಯರಾದ ಡಾ. ವಿರೂಪಾಕ್ಷ ದೇವರಮನೆ, ಡಾ ಮಾನಸ್ ಇ. ಆರ್. ಅವರು ಉಪಸ್ಥಿತರಿದ್ದರು.ನವಜೀವನ ಲೇ ಕೌನ್ಸಿಲರ್ ನ ತರಬೇತಿ ಕಾರ್ಯಾಗಾರದ ಸಂಯೋಜಕಿ ಮತ್ತು ಆಸ್ಪತ್ರೆಯ ಆಡಳಿತ ಅಧಿಕಾರಿ ಸೌಜನ್ಯ ಶೆಟ್ಟಿ ಆಗಮಿಸಿದ ಸರ್ವರನ್ನು ಸ್ವಾಗತಿಸಿದರು, ಆಸ್ಪತ್ರೆಯ ಭದ್ರತಾ ಸಿಬ್ಬಂದಿಯಾದ ಭಾಗ್ಯಶ್ರೀ ಇವರು ಕಾರ್ಯಕ್ರಮಕ್ಕೆ ಪ್ರಾರ್ಥಿಸಿದರು. ದೀಪಶ್ರೀ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು. ಇದೇ ಆಸ್ಪತ್ರೆಯಲ್ಲಿ ನವಜೀವನ ಲೇ ಕೌನ್ಸಿಲರ್ ನ 7ನೇ ಬ್ಯಾಚಿನ ತರಬೇತಿ ಕಾರ್ಯಾಗಾರವು ಅಕ್ಟೋಬರ್ ತಿಂಗಳಲ್ಲಿ ಆರಂಭಗೊಳ್ಳಲಿದೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.