ಕೆಎಂಸಿ: ಜುಲೈ 30, 31ರಂದು ಫಲವತ್ತತೆ- ಬಂಜೆತನ ಉಚಿತ ತಪಾಸಣಾ ಶಿಬಿರಬಂಜೆತನ ಮತ್ತು ಸಂತಾನೋತ್ಪತ್ತಿ ಆರೋಗ್ಯದ ಬಗ್ಗೆ ಹೆಚ್ಚುತ್ತಿರುವ ಕಳವಳಗಳನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ಮಹತ್ವದ ಉಪಕ್ರಮದಲ್ಲಿ, ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯು ಜುಲೈ 30, 31ರಂದು ಉಚಿತವಾಗಿ ಫಲವತ್ತತೆ ಮತ್ತು ಬಂಜೆತನ ತಪಾಸಣಾ ಶಿಬಿರವನ್ನು ಆಯೋಜಿಸುತ್ತಿದೆ. ಆಸ್ಪತ್ರೆಯ ಸಂತಾನೋತ್ಪತ್ತಿ ಔಷಧ ಮತ್ತು ಶಸ್ತ್ರಚಿಕಿತ್ಸಾ ವಿಭಾಗದಲ್ಲಿ ಎರಡೂ ದಿನ ಬೆಳಗ್ಗೆ 9.30ರಿಂದ ಮಧ್ಯಾಹ್ನ 12.30ರ ವರೆಗೆ ಈ ಶಿಬಿರವ ನಡೆಯಲಿದೆ.