ಉಡುಪಿ ಎಸ್‌ಡಿಎಂಎ ಕಾಲೇಜು ಆಸ್ಪತ್ರೆಯಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮ ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಮುದಾಯ ಸೇವಾ ವಿಭಾಗ, ಯೂತ್ ರೆಡ್‌ಕ್ರಾಸ್ ಘಟಕವು ದ್ರವ್ಯಗುಣ ವಿಭಾಗದ ಸಹಯೋಗದೊಂದಿಗೆ ಗುರುವಾರ ಏಡ್ಸ್‌ನ ಬಗ್ಗೆ ಮಾಹಿತಿ - ಜಾಗೃತಿ ಉಪನ್ಯಾಸ ಕಾರ್ಯಕ್ರಮ ಹಾಗೂ ಪೋಸ್ಟರ್ ತಯಾರಿಕೆ ಸ್ಪರ್ಧೆ ಆಯೋಜಿಸಲಾಯಿತು.