ಅಂಬೇಡ್ಕರ್‌ಗೆ ಅವಮಾನ ಮಾಡಿದ್ದು ಕಾಂಗ್ರೆಸ್: ದಿನಕರ್ ಬಾಬುಕಾಂಗ್ರೆಸ್ ಸರ್ಕಾರ ಅಂಬೇಡ್ಕರ್ ಅವರಿಗೆ ಭಾರತರತ್ನ ನೀಡಲಿಲ್ಲ, ಬಿಜೆಪಿ ಸರ್ಕಾರ ಈ ಸಂವಿಧಾನ ಶಿಲ್ಪಿಗೆ ಭಾರತ ರತ್ನ ನೀಡಿತು ಎಂದು ಅಮಿತ್ ಷಾ ಅವರು ಲೋಕಸಭೆಯಲ್ಲಿ ಹೇಳಿದ್ದರು. ಆದರೆ ಕಾಂಗ್ರೆಸ್ ಈ ಮಾತನ್ನು ತಿರುಚಿ, ಜನರಲ್ಲಿ ವಿಷ ಬೀಜ ಬಿತ್ತುವ ಕಾರ್ಯಕ್ಕೆ ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ ಎಂದು ದಿನಕರ ಬಾಬು ಹೇಳಿದ್ದಾರೆ.