9 ವಿ.ವಿ. ಮುಚ್ಚಲು ಹೊರಟಿರುವುದು ಅವೈಜ್ಞಾನಿಕ: ಡಾ.ಸುರೇಂದ್ರ ಶೆಟ್ಟಿರಾಜ್ಯ ಬಜೆಟಿನಲ್ಲಿ ಶಿಕ್ಷಣಕ್ಕೆ ಸಾಕಷ್ಟು ಅನುದಾನವನ್ನು ನೀಡದಿರುವುದು ಮತ್ತು ೯ ಹೊಸ ವಿಶ್ವವಿದ್ಯಾಲಯಗಳಿಗೆ ಸರ್ಕಾರ ಬಜೆಟಿನಲ್ಲಿ ಯಾವುದೇ ಅನುದಾನವನ್ನು ಘೋಷಿಸದೆ ಮುಚ್ಚಲು ಹೊರಟಿರುವುದು ಅವೈಜ್ಞಾನಿಕ ಮತ್ತು ದುರಂತ ಎಂದು ಕರ್ನಾಟಕ ರಾಜ್ಯ ಮಹಾ ವಿದ್ಯಾಲಯಗಳ ಶಿಕ್ಷಕರ ಸಂಘದ ಅಧ್ಯಕ್ಷ ಡಾ. ಸುರೇಂದ್ರ ಶೆಟ್ಟಿ, ಆತಂಕ ವ್ಯಕ್ತಪಡಿಸಿದ್ದಾರೆ.