ಕಾಪು: ಹೈಟೆನ್ಶನ್ ವಿದ್ಯುತ್ ಕಾಮಗಾರಿ ತಾತ್ಕಾಲಿಕ ಸ್ಥಗಿತನಂದಿಕೂರಿನಲ್ಲಿರುವ ಅದಾನಿ ಉಷ್ಣ ವಿದ್ಯುತ್ ಸ್ಥಾವರದಿಂದ ಪಕ್ಕದ ಕೇರಳ ರಾಜ್ಯಕ್ಕೆ ವಿದ್ಯುತ್ ಸರಬರಾಜಿಗಾಗಿ ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ಕೃಷಿ ಭೂಮಿ ಹಾಗೂ ಜನವಸತಿ ಪ್ರದೇಶದಲ್ಲಿ ಹೈ ಟೆನ್ಷನ್ ವಿದ್ಯುತ್ ತಂತಿಗಳನ್ನು ಅಳವಡಿಸುವ ಕಾಮಗಾರಿಯನ್ನು ಸ್ಥಳೀಯರ ವಿರೋಧದಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು.