ಉಡುಪಿ: ಸಾಧಕ ಪತ್ರಕರ್ತರಿಗೆ ಗೌರವ ಕಾರ್ಯಕ್ರಮತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾಕೂಟದಲ್ಲಿ ಹಲವು ಪದಕಗಳನ್ನು ಗೆಲ್ಲುವ ಮೂಲಕ ಉಡುಪಿ ತಂಡಕ್ಕೆ ಸಮಗ್ರ ಪ್ರಶಸ್ತಿ ಪಡೆದ ಪತ್ರಕರ್ತರಾದ ಅನಿಲ್ ಕೈರಂಗಳ, ಮುಹಮ್ಮದ್ ಶರೀಫ್, ಸುರೇಶ್ ಎರ್ಮಾಳು, ಉದಯ ಕುಮಾರ್ ಮುಂಡ್ಕೂರು, ಚೇತನ್ ಪೂಜಾರಿ ಮಟಪಾಡಿ ಅವರನ್ನು ಅಭಿನಂದಿಸಲಾಯಿತು. ತಂಡದ ನೇತೃತ್ವ ವಹಿಸಿದ್ದ ಸಂಘದ ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ಅವರನ್ನು ಗೌರವಿಸಲಾಯಿತು.