ಬಜೆಟ್‌ನಲ್ಲಿ ಬ್ರಹ್ಮಾವರ ಕೃಷಿ ಕಾಲೇಜು ಸ್ಥಾಪನೆಗೆ ಕೃಷಿಕ ಸಮಾಜ ಒತ್ತಾಯಬ್ರಹ್ಮಾವರದಲ್ಲಿ ಕೃಷಿ ಕಾಲೇಜು ಆರಂಭಿಸಲು ಈ ಬಾರಿಯ ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಅನುಮೋದನೆ ಅನುದಾನ ನೀಡುವಂತೆ ಕರ್ನಾಟಕ ಪ್ರದೇಶ ಕೃಷಿಕ ಸಮಾಜ ಆಗ್ರಹಿಸಿದೆ. ಕರಾವಳಿಯ ಮೂರು ಜಿಲ್ಲೆಗಳಲ್ಲಿಯೂ ಕೃಷಿ ಮತ್ತು ತೋಟಗಾರಿಕಾ ಮಹಾವಿದ್ಯಾಲಯವಿಲ್ಲ. ಈ ಭಾಗದ ವಿದ್ಯಾರ್ಥಿಗಳು ಹಾಗೂ ರೈತರ ಮಕ್ಕಳಿಗೆ ಕೃಷಿ ವಿಜ್ಣಾನದಲ್ಲಿ ಪದವಿ ವ್ಯಾಸಂಗ ಮಾಡಿ, ಪದವಿ ಪಡೆಯಲು ಹಿನ್ನಡೆಯಾಗುತ್ತಿದೆ.