ಅಕ್ರಮ- ಸಕ್ರಮ ಸಮಿತಿ ಗಮನಕ್ಕೆ ತರದೇ ಲಕ್ಷಾಂತರ ಅರ್ಜಿಗಳ ತಿರಸ್ಕಾರ: ಸುನಿಲ್ ಕುಮಾರ್ ಆರೋಪಮಲೆನಾಡು, ಕರಾವಳಿ ಭಾಗಗಳು ಸೇರಿದಂತೆ ರಾಜ್ಯದ ಬಹುತೇಕ ಎಲ್ಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸರ್ಕಾರ, ಶಾಸಕರ ಅಧ್ಯಕ್ಷತೆಯಲ್ಲಿ ಈ ಸಮಿತಿ ರಚನೆ ಮಾಡಿದೆ. ಅರ್ಜಿಯ ಅಂಗೀಕಾರ ಅಥವಾ ತಿರಸ್ಕಾರ ಈ ಸಮಿತಿಯಲ್ಲೇ ಆಗಬೇಕು. ಆದರೆ ಅಧಿಕಾರಿಗಳು ಈ ವಿಚಾರವನ್ನು ಸಭೆಯಲ್ಲಿ ಚರ್ಚಿಸದೇ ಏಕಪಕ್ಷೀಯವಾಗಿ ನಿರಾಕರಿಸುತ್ತಿರುವುದು ಸಂವಿಧಾನ ಬಾಹಿರ.