ಉಡುಪಿ: ಯಕ್ಷಶಿಕ್ಷಣ ಸನಿವಾಸ ಶಿಬಿರಕ್ಕೆ ಚಾಲನೆಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಯಕ್ಷ ಶಿಕ್ಷಣ ಟ್ರಸ್ಟ್ ಉಡುಪಿ ವತಿಯಿಂದ, ಭೀಮ ಗೋಲ್ಡ್ ಪ್ರೈ. ಲಿ., ಬೆಂಗಳೂರು ಪ್ರಾಯೋಜಕತ್ವದಲ್ಲಿ ಆಯೋಜಿಸಲಾದ ಒಂದು ವಾರದ ಯಕ್ಷಶಿಕ್ಷಣ ಸನಿವಾಸ ಶಿಬಿರ - 2025 ನ್ನು ಶನಿವಾರ ಅಂಬಲಪಾಡಿ ದೇವಳದ ಧರ್ಮದರ್ಶಿಗಳಾದ ಡಾ. ನಿ. ಬೀ. ವಿಜಯ ಬಲ್ಲಾಳರು ಉದ್ಘಾಟಿಸಿದರು.