ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮದ ಸಮಾರೋಪ ಸಮಾರಂಭಸ್ವಚ್ಛತಾ ಹೀ ಸೇವಾ ಆಂದೋಲನ ಕಾರ್ಯಕ್ರಮದ ಅಂಗವಾಗಿ ಉಡುಪಿ ನಗರದ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಸ್ವಚ್ಛತಾ ಪ್ರತಿಜ್ಞೆ, ಸಸಿ ನೆಡುವುದು, ತ್ಯಾಜ್ಯದಿಂದ ಕಲಾಕೃತಿ, ನೈರ್ಮಲ್ಯ ಶುಚಿತ್ವ ಕುರಿತು ಪ್ರಬಂಧ ಸ್ಪರ್ಧೆ, ಸ್ವಚ್ಛತೆಯ ಬಗ್ಗೆ ಕಿರು ನಾಟಕ, ಸ್ವಚ್ಛತಾ ಕಾರ್ಯಕ್ರಮ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.