ಉಪ್ಪಿನಕುದ್ರು ಗೊಂಬೆಮನೆಯಲ್ಲಿ ಯಕ್ಷಗಾನ ಪ್ರಸಂಗಕೃತಿಗಳ ಅನಾವರಣಗೊಂಬೆಮನೆಯ ಉಪ್ಪಿನಕುದ್ರು ಶ್ರೀ ದೇವಣ್ಣ ಪದ್ಮನಾಭ ಕಾಮತ್ ಮೆಮೋರಿಯಲ್ ಯಕ್ಷಗಾನ ಗೊಂಬೆಯಾಟ ಟ್ರಸ್ಟ್ ಆಶ್ರಯದಲ್ಲಿ, ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಕನ್ನಡ ಉಪನ್ಯಾಸಕ, ಕಲಾವಿದ ಡಾ. ಶಿವಕುಮಾರ ಅಳಗೋಡು ರಚಿಸಿದ, ರಾಜ್ಯಮಟ್ಟದ ಯಕ್ಷಗಾನ ಪ್ರಸಂಗರಚನಾ ಸ್ಪರ್ಧೆಯಲ್ಲಿ ದ್ವಿತೀಯ ಪ್ರಶಸ್ತಿ ವಿಜೇತ ‘ಯವಕ್ರೀತ ವೃತ್ತಾಂತ’ ಹಾಗೂ ‘ಶ್ರೀಕೃಷ್ಣ ಕಾರುಣ್ಯ’ ಪೌರಾಣಿಕ ಪ್ರಸಂಗಕೃತಿಯನ್ನು ಅನಾವರಣಗೊಳಿಸಲಾಯಿತು.