ಶಾಲಾ-ಕಾಲೇಜು ನಿರ್ವಹಣೆ ಅನುದಾನ ಬಿಡುಗಡೆಗೆ ಸಿಎಂಗೆ ಶಾಸಕ ಯಶ್ಪಾಲ್ ಪತ್ರಉಡುಪಿ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ನೀಡಲಾಗುವ ನಿರ್ವಹಣಾ ಅನುದಾನ ಬಿಡುಗಡೆಯಾಗದೆ ವಿದ್ಯುತ್ ಬಿಲ್ ಪಾವತಿ ಮಾಡಲಾಗುತ್ತಿಲ್ಲ. ಇದರಿಂದ ಮೆಸ್ಕಾಂ ಅಧಿಕಾರಿಗಳು ಶಾಲಾ-ಕಾಲೇಜುಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಸೂಚನೆ ನೀಡಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸಮರ್ಪಕವಾಗಿ ಗೌರವಧನ ಪಾವತಿಯಾಗದೆ ಸಂಕಷ್ಟಕ್ಕೊಳಗಾಗಿದ್ದಾರೆ.