ಎಸ್‌ಡಿಪಿಐನ ಬೆಳಗಾವಿ ಚಲೋಗೆ ಆರಂಭದಲ್ಲಿಯೇ ವಿಘ್ನ!ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಉಡುಪಿಯಿಂದ ಆರಂಭಿಸಲಿದ್ದ ಬೆಳಗಾವಿ ಚಲೋಗೆ ಆರಂಭದಲ್ಲಿಯೇ ಪೊಲೀಸರಿಂದ ವಿಘ್ನ ಎದುರಾಗಿದೆ. ಉಡುಪಿಯಿಂದ ಮಂಗಳವಾರ ಈ ಚಲೋ ಆರಂಭಿಸಲು ಪೊಲೀಸ್ ಅನುಮತಿ ನೀಡದೇ ಗೊಂದಲಕ್ಕೆ ಕಾರಣವಾಯಿತು. ಕೊನೆಗೆ ಅಧಿಕೃತವಾಗಿ ಚಲೋ ಕಾರ್ಯಕ್ರಮ ಆರಂಭವಾಗಲಿಲ್ಲ.