27ರಂದು ಶಿರೂರು ಮಠದಲ್ಲಿ ವೈಭವದ ವಿಟ್ಲಪಿಂಡಿಕೀರ್ತಿಶೇಷ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರು ಪ್ರತಿವರ್ಷ ಶ್ರೀಕೃಷ್ಣ ಜನ್ಮಾಷ್ಟಮಿ ವಿಟ್ಲಪಿಂಡಿ ಮಹೋತ್ಸವಕ್ಕೆ ವಿಭಿನ್ನ ಮೆರುಗು ನೀಡಿ, ವೈಶಿಷ್ಟಪೂರ್ಣವಾಗಿ ಆಚರಿಸುತಿದ್ದರು. ಅವರು ಹಾಕಿಕೊಟ್ಟ ಮೇಲ್ಪಂಕ್ತಿಯಲ್ಲಿ ಹಾಲಿ ಮಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಈ ಬಾರಿಯೂ ವಿಟ್ಲಪಿಂಡಿ ಮಹೋತ್ಸವವನ್ನು ವೈಭವದಿಂದ ಆಚರಿಸಲು ನಿರ್ಧರಿಸಿದ್ದಾರೆ.