26ರಂದು ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಈಡುಗಾಯಿ ಒಡೆದು ಪ್ರತಿಭಟನೆ: ವಾಟಾಳ್ಮಹಾದಾಯಿ, ಕಳಸಾ ಬಂಡೂರಿ, ಮೇಕೆದಾಟು ಯೋಜನೆಗಳು ತಕ್ಷಣ ಜಾರಿಯಾಗಬೇಕು, ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗಕ್ಕೆ ಆದ್ಯತೆ ನೀಡಬೇಕು, ಗ್ರೇಟರ್ ಬೆಂಗಳೂರು, ಸಮಗ್ರ ಕರ್ನಾಟಕ ರಚನೆಯಾಗಬೇಕು ಎಂದು ಆಗ್ರಹಿಸಿ ಏ.26ರಂದು ರಾಜ್ಯಾದ್ಯಂತ 2 ಕೋಟಿಗೂ ಅಧಿಕ ಈಡುಗಾಯಿಗಳನ್ನು ಒಡೆಯುವ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.