ಧರ್ಮಸ್ಥಳದಲ್ಲಿ ಷಡ್ಯಂತ್ರ: ಡಿಸಿಎಂ ಹೇಳಿಕೆಗೆ ಲಕ್ಷ್ಮೀ ಹೆಬ್ಬಾಳ್ಕರ್ ಸಹಮತಧರ್ಮಸ್ಥಳ ವಿಚಾರದಲ್ಲಿ ಉಪಮುಖ್ಯಮಂತ್ರಿ ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ಅವರು ನಾವೆಲ್ಲರೂ ಧರ್ಮಸ್ಥಳ ಮಂಜುನಾಥನ ಭಕ್ತರು, ಧರ್ಮಾಧಿಕಾರಿ ಹೆಗ್ಗಡೆ ಅವರ ಸಾಮಾಜಿಕ ಕಾರ್ಯಗಳು ಇತರರಿಗೂ ಆದರ್ಶವಾಗಿವೆ. ಅಲ್ಲಿ ಷಡ್ಯಂತ್ರ ನಡೆದಿದೆ ಎಂಬ ಅವರ ವ್ಯಾಖ್ಯಾನಕ್ಕೆ ನನ್ನ ಸಹಮತವಿದೆ ಎಂದು ಹೆಬ್ಬಾಳ್ಕರ್ ತಿಳಿಸಿದ್ದಾರೆ.