ಕುಂದಾಪುರ: ತಗ್ಗು ಪ್ರದೇಶಗಳಲ್ಲಿ ಮತ್ತೆ ನೀರು ಆವರಿಸಿಕೊಳ್ಳುವ ಭೀತಿಘಟ್ಟ ಪ್ರದೇಶದಲ್ಲಿ ಬೀಳುತ್ತಿರುವ ಮಳೆ ಹಾಗೂ ಇಲ್ಲಿ ಸುರಿಯುತ್ತಿರುವ ನೀರಿನ ಧಾರೆಯಿಂದಾಗಿ ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಹರಿಯುತ್ತಿರುವ ವಾರಾಹಿ, ಸೌಪರ್ಣಿಕಾ, ಪಂಚಗಂಗಾವಳಿ, ಕುಬ್ಜಾ ಮುಂತಾದ ಪ್ರಮುಖ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.