ಕೃಷ್ಣಮಠದ ಮಂಡಲೋತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಆಹ್ವಾನಆಗಸ್ಟ್ 1ರಿಂದ ಸೆಪ್ಟೆಂಬರ್ 15ರ ವರೆಗೆ 48 ದಿನ ಈ ಮಂಡಲೋತ್ಸವ, ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ವೈಭವದಿಂದ ನಡೆಯಲಿದೆ. ಆ.1ರಂದು ಉದ್ಘಾಟನೆಗೊಳ್ಳಲಿದ್ದು, ಈ ಕಾರ್ಯಕ್ರಮಕ್ಕೆ ಬರುವಂತೆ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಆಶಯದಂತೆ ಶ್ರೀ ಮಠದ ಪರವಾಗಿ ಬೆಂಗಳೂರು ಶಾಖಾ ಮಠದ ಮುಖ್ಯಸ್ಥ ಎ.ಬಿ. ಕುಂಜಾರ್ ಮತ್ತು ಶ್ರೀಪಾದರ ಕಾರ್ಯದರ್ಶಿ ರತೀಶ್ ತಂತ್ರಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ಪ್ರಸಾದವನ್ನು ನೀಡಿ ಆಹ್ವಾನಿಸಿದರು.