ವಿನಯಕುಮಾರ್ ಸೊರಕೆಯನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಲು ಆಗ್ರಹಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ 5 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಸೋತರೂ ಸೊರಕೆಯವರು ಕಾರ್ಯಕರ್ತರ ಪರ ನಿಂತು ಅವರ ಕೆಲಸಗಳನ್ನು ಮಾಡಿಕೊಡುತ್ತಾ ಪಕ್ಷ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾ ಕಾಂಗ್ರೆಸ್‌ಗೆ ಬೆನ್ನೆಲುಬಾಗಿ ನಿಂತಿದ್ದಾರೆ ಎಂದು ಶಿರ್ವ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನ್ಯಾಯವಾದಿ ಮೆಲ್ವಿನ್ ಡಿಸೋಜ ಹೇಳಿದ್ದಾರೆ.