ಮಲ್ಪೆ ಹಲ್ಲೆ ಆರೋಪಿಗಳು, ಬೆಂಬಲಿಗರ ಮೇಲೂ ಕೇಸಾಗಲಿ: ಮಹಾ ಒಕ್ಕೂಟಪರಿಶಿಷ್ಟ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ, ಹಲ್ಲೆ, ದೌರ್ಜನ್ಯ ನಡೆಸಿರುವ ಮತ್ತು ಆ ದೌರ್ಜನ್ಯವನ್ನು ಬೆಂಬಲಿಸಿರುವ, ಸಮರ್ಥಿಸಿರುವ ಎಲ್ಲರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತರಾಗಿ ಕೇಸು ದಾಖಲಿಸಿ, ಕಾನೂನಿನ ಮಾನ ಕಾಪಾಡಬೇಕು ಎಂದು ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸಂಘ ಸಂಸ್ಥೆಗಳ ಮಹಾ ಒಕ್ಕೂಟ ಆಗ್ರಹಿಸಿದೆ.