ಜೂನ್ 3ರಂದು ನೈರುತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆಮೇ 9ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಿದ್ದು, ನಾಮಪತ್ರ ಸಲ್ಲಿಕೆಗೆ ಮೇ 16 ಕೊನೆಯ ದಿನವಾಗಿದೆ. ಮೇ 17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಮೇ 20 ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದೆ. ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದ್ದು, ಜೂನ್ 6ರಂದು ಮತಗಳ ಎಣಿಕೆ ಕಾರ್ಯ ನಡೆಯಲಿದೆ.