ವಿವಾಹ ನೋಂದಣಾಧಿಕಾರಿಗೆ ಶ್ರೀರಾಮಸೇನೆ ಮನವಿಇತ್ತೀಚೆಗೆ ರಾಜ್ಯದಲ್ಲಿ ಹೆಚ್ಚುತ್ತಿರುವ ಅಂತರ ಧರ್ಮೀಯ ವಿವಾಹಗಳು ಕೋಮು ಸ್ವರೂಪ ಪಡೆಯುತ್ತಿದ್ದು, ಸಮಾಜದ ಸಾಮರಸ್ಯ ಹಾಳು ಮಾಡುತ್ತಿವೆ. ಕೆಲವು ವಿವಾಹ ನೋಂದಣಿ ಕಚೇರಿಗಳಲ್ಲಿ ಸರಿಯಾದ ಕ್ರಮದಲ್ಲಿ ದಾಖಲೆ ಪರಿಶೀಲೀಸದೆ, ನೋಟೀಸ್ ಬೋರ್ಡ್ ಗೆ ಪ್ರಕಟಣೆಯನ್ನೂ ಹಾಕದೇ ವಿವಾಹ ಮಾಡುವ ಬಗ್ಗೆ ದೂರುಗಳಿವೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಹಿರಿಯ ವಿವಾಹ ನೋಂದಣಾಧಿಕಾರಿ ಶ್ರೀ ಪಣೀಂದ್ರ ಅವರಿಗೆ ಉಡುಪಿ ಜಿಲ್ಲಾ ಶ್ರೀರಾಮಸೇನೆ ಮನವಿ ಸಲ್ಲಿಸಿತು.