ಮಲ್ಪೆ ಬೀಚ್‌ನಲ್ಲಿ ಅಂತಾರಾಷ್ಟ್ರೀಯ ಕರಾವಳಿ ಸ್ವಚ್ಛತಾ ದಿನಾಚರಣೆಅಂತಾರಾಷ್ಟ್ರೀಯ ಕರಾವಳಿ ಸ್ವಚ್ಛತಾ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲಾಡಳಿತ ವತಿಯಿಂದ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಉಡುಪಿ ಜಿಲ್ಲೆಯ ಮಲ್ಪೆ ಬೀಚ್, ಕಾಪು ಬ್ಲೂ ಫ್ಲಾಗ್ ಬೀಚ್, ಡೆಲ್ಟಾ ಬೀಚ್, ಕೋಡಿ ಬೀಚ್, ತ್ರಾಸಿ, ಮರವಂತೆ, ಬೈಂದೂರಿನ ಸೋಮೇಶ್ವರ ಮುಂತಾದ ಪ್ರಮುಖ ಕಡಲ ಕಿನಾರೆಯಲ್ಲಿ ಏಕಕಾಲದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.