೨೫ ರಂದು ನಂದಳಿಕೆ ಸಿರಿ ಜಾತ್ರೆ, ಆಯನೋತ್ಸವಮಾ.೨೫ರಂದು ನಂದಳಿಕೆ ಆಯನೋತ್ಸವ ಸಿರಿಜಾತ್ರಾ ಮಹೋತ್ಸವ ಜರುಗಲಿದ್ದು, ಬೆಳಗ್ಗೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ರಾತ್ರಿ ೧೧ ರಿಂದ ಸತ್ಯದ ಸಿರಿಗಳ ಮೂಲಕ್ಷೇತ್ರ ಶ್ರೀ ಆಲಡೆ ಸನ್ನಿಧಾನದಲ್ಲಿ ಶ್ರೀ ಸಿರಿ ಕುಮಾರ, ಅಬ್ಬಗ ದಾರಗ ದರ್ಶನಾವೇಶಾಪೂರ್ವಕ ಸೂರ್ಯೋದಯ ಪರ್ಯಂತ ಸಪ್ತ ಸತ್ಯದ ಸಿರಿಗಳ ನಂದಳಿಕೆ ಸಿರಿ ಜಾತ್ರೆ ನೆರವೇರಲಿದೆ.