ಬಾಲ್ಯದಲ್ಲಿಯೇ ಉತ್ತಮ ಜೀವನ ಕಲ್ಪಿಸಿದರೆ ಸುಸ್ಥಿರ ಸಮಾಜ ಸಾಧ್ಯ: ನ್ಯಾ. ಸೋಮನಾಥ್ಉಡುಪಿ ತಾ.ಪಂ. ಸಭಾಂಗಣದಲ್ಲಿ ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ಸಹಯೋಗದಲ್ಲಿ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಯ ವೈದ್ಯಾಧಿಕಾರಿ, ಸಂಚಾರಿ ಪೊಲೀಸ್ ಸಿಬ್ಬಂದಿಗೆ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಬಾಲನ್ಯಾಯ ಕಾಯ್ದೆ 2015, ತಿದ್ದುಪಡಿ 2021, ಮಕ್ಕಳ ಮೇಲಿನ ಲೈಂಗಿಕ ಅಪರಾಧ ತಡೆ ಕಾಯ್ದೆ 2012 ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಮತ್ತು ದತ್ತು ಕಾರ್ಯಕ್ರಮದ ಕುರಿತು ತರಬೇತಿ ಕಾರ್ಯಾಗಾರ ನಡೆಯಿತು.