ಬಂಜಾರ ಸಮುದಾಯಕ್ಕೆ ಜ್ಞಾನದ ಬೆಳಕು ನೀಡಿದ ಸೇವಾಲಾಲ್: ಎಡಿಸಿ ಮಮತಾ ದೇವಿ ಜಿ.ಎಸ್.ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೃಷ್ಣನಗರಿ ಶ್ರೀ ಸಂತ ಸೇವಾಲಾಲ್ ಬಂಜಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಸಂತ ಸೇವಾಲಾಲ ಜಯಂತಿ ಕಾರ್ಯಕ್ರಮ ನಡೆಯಿತು. ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್. ಸೇವಾಲಾಲರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.