ಸಿದ್ದರಾಮಯ್ಯ ಸರ್ಕಾರ ಜನರಲ್ಲಿ ಗೊಂದಲ ಮೂಡಿಸಿದೆ: ಕೋಟ ಸರ್ಕಾರ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಅವಧಿ ವಿಸ್ತರಣೆ ಮಾಡಿದೆ, ಲೋಕ ಚುನಾವಣೆವರೆಗೆ ಇದನ್ನು ಮುಂದೆ ತೆಗೆದುಕೊಂಡು ಹೋಗುವ ಯೋಚನೆ ಮಾಡಿದಂತಿದೆ. ಆಯೋಗದ ವರದಿಯ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೆ ಹಿಂದುಳಿದ ವರ್ಗ, ದಲಿತ, ಪರಿಶಿಷ್ಟರನ್ನು ಕತ್ತಲಲ್ಲಿಡುವ ಕೆಲಸ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯರ ಈ ನಿಲುವು ಖಂಡಿಸುತ್ತೇನೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.